ಆಂಧ್ರದಲ್ಲಿ ನಿಂತಿದ್ದ ರೈಲಿಗೆ ಮತ್ತೊಂದು ರೈಲು ಡಿಕ್ಕಿ: 9 ಪ್ರಯಾಣಿಕರ ದುರ್ಮರಣ
1 min read
ಮತ್ತೆ ರೈಲು ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದ ಎರಡು ರೈಲುಗಳ ಮಧ್ಯೆ ಆದ ಘರ್ಷಣೆಯ ತೀವ್ರತೆಗೆ 9 ಮಂದಿ ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಿಗ್ನಲಿಂಗ್ ಸಮಸ್ಯೆಯಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ವಿಶಾಖಪಟ್ಟಣಂ: ನಿಂತಿದ್ದ ರೈಲಿಗೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ 9 ಪ್ರಯಾಣಿಕರು ಮೃತಪಟ್ಟು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ವಿಶಾಖಪಟ್ಟಣಂನಿಂದ ಪಲಾಸಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ವಿಜಯನಗರಂನಿಂದ ರಾಯಗಢಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಅದೇ ಮಾರ್ಗದಲ್ಲಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡೂ ರೈಲಿನ ಒಟ್ಟು 4 ಬೋಗಿಗಳು ಹಳಿತಪ್ಪಿವೆ. ಅಪಘಾತದ ತೀವ್ರತೆಗೆ 9 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.