ಗಡಿ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸಿ
1 min readಗಡಿ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸಿ
ಸಂಘ ಸಂಸ್ಥೆಗಳ ಕೊಡುಗೆಯಿಂದಲೇ ಗಡಿ ಶಾಲೆಗಳ ಅಭಿವೃದ್ಧಿ
ಬಾಗೇಪಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಂಘ ಸಂಸ್ಥೆಗಳಿಗೆ ತನುಜಾ ಮನವಿ
ಬಾಗೇಪಲ್ಲಿ ತಾಲೂಕಿನ ಹಲವಾರು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಬೆಂಗಳೂರು ಮೂಲದ ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ ಅಪಾರ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ ಅಭಿಪ್ರಾಯಪಟ್ಟರು. ತಾಲೂಕಿನ ಮಿಟ್ಟೆಮರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುನೈಟೆಡ್ ವೇ ಮತ್ತು ಫ್ರೊ ಸರ್ವ್ ಸಂಸ್ಥೆಗಳಿoದ ನೂತನವಾಗಿ ನಿರ್ಮಿಸಿದ ತರಗತಿ ಕೊಠಡಿಗಳ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.
ಬಾಗೇಪಲ್ಲಿ ತಾಲೂಕಿನ ಹಲವಾರು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಬೆಂಗಳೂರು ಮೂಲದ ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ ಅಪಾರ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ ಅಭಿಪ್ರಾಯಪಟ್ಟರು. ತಾಲೂಕಿನ ಮಿಟ್ಟೆಮರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುನೈಟೆಡ್ ವೇ ಮತ್ತು ಫ್ರೊ ಸರ್ವ್ ಸಂಸ್ಥೆಗಳಿAದ ನೂತನವಾಗಿ ನಿರ್ಮಿಸಿದ ತರಗತಿ ಕೊಠಡಿಗಳ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಇಓ ತನುಜಾ, ಆಂಧ್ರಪ್ರದೇಶದ ಗಡಿಗೆ ಹೊಂದಿಕೊAಡಿರುವ ಬಾಗೇಪಲ್ಲಿ ತಾಲೂಕಿನ ಹಲವಾರು ಸರಕಾರಿ ಶಾಲೆಗಳ ಅಗತ್ಯತೆಗಳನ್ನು ಅರಿತು ಬೆಂಗಳೂರು ಮೂಲದ ಹಲವಾರು ಸಂಘ ಸಂಸ್ಥೆಗಳು ಸಹಾಯ ಮಾಡಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿವೆ ಎಂದರು.
ನೂತನ ಶಾಲಾ ಕೊಠಡಿಗಳ ನಿರ್ಮಾಣ, ಶಾಲಾ ಕೊಠಡಿಗಳಿಗೆ ಸುಣ್ಣಬಣ್ಣ ಬಳಿಯುವ, ದುರಸ್ತಿ ಮಾಡುವ, ಸ್ಮಾರ್ಟ್ ತರಗತಿಗಳನ್ನು ತೆರೆಯುವುದು ಸೇರಿದಂತೆ ಹಲವಾರು ರೀತಿಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಜೊತೆಗೆ ಭೌತಿಕ ಪರಿಸರವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸುತ್ತಿವೆ. ಇವರೆಲ್ಲರ ಸೇವಾ ಕಾರ್ಯಕ್ರಮಗಳಿಂದಾಗಿ ಗಡಿಭಾಗದ ಶಾಲೆಗಳಲ್ಲಿ ಓದುತ್ತಿರುವ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗಲಿದೆ ಎಂದು ತಿಳಿಸಿದರು.
ಪ್ರೊ ಸರ್ವ್ ಮತ್ತು ಯುನೆಟೆಡ್ ವೇ ಸಂಸ್ಥೆಯವರು ಮಿಟ್ಟೇಮರಿ, ಗೂಳೂರು ಮತ್ತಿತರ ಶಾಲೆಗಳ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅಂಗನವಾಡಿ ಕೊಠಡಿಗಳನ್ನು, ಶಾಲಾ ತರಗತಿಗಳ ಕೊಠಡಿಗಳನ್ನು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಮಕ್ಕಳಾಕರ್ಷಕ ರೀತಿಯಲ್ಲಿ ಶಾಲಾ ವಾತವರಣ ಸೃಷ್ಟಿಸಿದ್ದಾರೆ. ಹಾಗಾಗಿ ಅವರ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.