ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ
1 min readಕ್ರಿಕೆಟ್ ಏಕತೆಯ ಕ್ರೀಡೆಯಾಗಿದೆ
ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ
ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ
ಅಂತಾರಾಷ್ಟಿಯ ಕ್ರೀಡೆಯಾದ ಕ್ರಿಕೆಟ್ ಏಕತೆ ಮತ್ತು ಐಕ್ಯತೆಯನ್ನು ಸಾರುವ ಕ್ರೀಡೆಯಾಗಿದೆ, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ರಾಜ್ಯಮಟ್ಟದ ಆರ್‌ಎಚ್‌ಎಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್‌ರೆಡ್ಡಿ ಹೇಳಿದರು.
ಕ್ರೀಡೆಗಳಲ್ಲಿ ಭಾಗವಹಿಸಿದರೆ ಆರೋಗ್ಯ ವೃದ್ಧಿಯಾಗಲಿದೆ ಎಂಬುದನ್ನು ಜನತೆ ಅರಿಯಬೇಕಿದೆ. ರಾಷ್ಟಿಯ ಕ್ರೀಡೆಗಳ ಜೊತೆಗೆ ದೇಸಿ ಕ್ರೀಡೆಗಳಾದ ಕಬಡ್ಡಿ, ಖೋಖೋ, ಚಿನ್ನಿದಾಂಡು, ಲಗೋರಿ, ಕುಂಟೆಬಿಲ್ಲೆ ಮುಂತಾದ ಕ್ರೀಡೆಗಳಿಗೂ ಪ್ರೋತ್ಸಾಹ ದೊರೆತರೆ ಗ್ರಾಮೀಣ ಪ್ರತಿಭೆಗಳು ರಾಷ್ಟಿಯ ಅಂತಾರಾಷ್ಟಿಯ ಮಟ್ಟದಲ್ಲಿ ಮಿಂಚಲಿದ್ದಾರೆ ಎಂದರು.
ಆರ್‌ಎಚ್‌ಎಲ್ ಫೌಂಡೇಶನ್ ಅಧ್ಯಕ್ಷ ರಘು ಮಾತನಾಡಿ, ಆರ್‌ಎಚ್‌ಎಲ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳಲ್ಲಿ ಪ್ರಥಮ ಸ್ಥಾನ ಗಳಿಸುವ ತಂಡಕ್ಕೆ 2,22,222 ಲಕ್ಷ ರೂಪಾಯಿ, ದ್ವಿತೀಯ ಸ್ಥಾನ ಗಳಿಸುವ ತಂಡಕ್ಕೆ 1,11,111 ಲಕ್ಷ ರೂಪಾಯಿ ನೀಡಲಾಗುವುದು. ಈ ಉದ್ದೇಶ ಹಣಕ್ಕಾಗಿ ಆಟ ಆಡಿಸುವುದಾಗಿರದೆ ನಿಜವಾದ ಪ್ರತಿಭೆಗಳನ್ನು ಕ್ರಿಕೆಟ್ ಲೋಕಕ್ಕೆ ಪರಿಚಯಿಸುವುದೇ ಆಗಿದೆ ಎಂದರು.
ಚಿಕ್ಕಬಳ್ಳಾಪುರ ನಗರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದ್ದು, ಈ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಫೌಂಡೇಶನ್‌ನಿ0ದ ಒದಗಿಸಲಾಗಿದೆ. ತೀರ್ಪುಗಾರರಾಗಿ ಮತ್ತು ವೀಕ್ಷಣೆ ಕ್ರೀಡಾ ವಿವರಣೆಗಾರರನ್ನು ಕುಂದಾಪುರ, ಉಡುಪಿ, ಕುಣಿಗಲ್ ಮೊದಲಾದ ಪ್ರದೇಶಗಳಿಂದ ಕರೆಯಲಾಗಿದೆ ಎಂದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಎರಡು ದಿನಗಳ ಆರ್‌ಎಚ್‌ಎಲ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗಿಯಾಗುವ ಕ್ರೀಡಾಪಟುಗಳಿಗೆ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಶುಭ ಹಾರೈಸಿದರು.