ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಬಿಗ್​ಬಾಸ್​​ ಡ್ರೋನ್​ ಪ್ರತಾಪ್​ಗೆ ಸಂಕಷ್ಟ; 50 ಲಕ್ಷ ರೂ. ಮೌಲ್ಯದ ಮಾನಹಾನಿ ಕೇಸ್ ದಾಖಲು

1 min read

ಬಿಗ್‌ಬಾಸ್‌ ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ಕೋವಿಡ್ ಕ್ವಾರಂಟೈನ್‌ ಅವಧಿಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬಿಗ್​ಬಾಸ್​​ ಮನೆಯಲ್ಲಿ ಹೀಗೆ ಮಾತನಾಡುತ್ತಾ ಡ್ರೋನ್​ ಪ್ರತಾಪ್​, ‘ಕೊವಿಡ್ ಸಮಯದಲ್ಲಿ ನಾನು ಸಾಕಷ್ಟು ಚಿತ್ರ ಹಿಂಸೆ ಅನುಭವಿಸಿದ್ದೆ.

ಕ್ವಾರಂಟೈನ್ ಟೈಮ್​ನಲ್ಲಿ ಅಧಿಕಾರಿಗಳು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರು. ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಒತ್ತಾಯಪೂರ್ವಕವಾಗಿ ಸಹಿ ಮಾಡುವಂತೆ ಹೇಳಿದ್ದರು’ ಎಂಬಿತ್ಯಾದಿ ಆರೋಪಗಳನ್ನು ಮಾಡಿ ಕಣ್ಣೀರು ಹಾಕಿದ್ದರು. ಇದಕ್ಕೆ ಬಿಬಿಎಂಪಿ ಅಧಿಕಾರಿಗಳು ಕೂಡ ತಿರುಗಿ ಬಿದ್ದಿದ್ದಾರೆ.

ಪ್ರತಾಪ್ ಅವರಿಗೆ ಕೋವಿಡ್ ಬಂದಾಗ ಕ್ವಾರಂಟೈನ್‌ನ ರೋಗಿಗಳನ್ನು ನೋಡಿಕೊಳ್ಳಲಿ ನಿಯೋಜನೆಗೊಂಡಿದ್ದ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ್ ಅವರು ಪ್ರತಾಪ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿದುಬಂದಿದೆ. ಪಾಲಿಕೆ ಅಧಿಕಾರಿ ಪ್ರಯಾಗ್ ರಾಜ್ 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವಿಚಾರಕ್ಕೆ ವಾದ – ಪ್ರತಿವಾದ ನಡೆದಿದ್ದು, ಇಂದು ಸಂಜೆಯೊಳಗೆ ಕೋರ್ಟ್‌ನಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ವಕೀಲರು ತಿಳಿಸಿದ್ದಾರೆ.

ಪ್ರತಾಪ್ ಕ್ವಾರಂಟೈನ್ ರೂಲ್ಸ್ ಉಲ್ಲಂಘನೆ ವಿರುದ್ಧ ನಾನೇ ಕೇಸ್ ದಾಖಲಿಸಿದ್ದೆ. ಕಾನೂನು ಪ್ರಕಾರವೇ ನಾನು ಕಾರ್ಯನಿರ್ವಹಿಸಿದ್ದೆ. ಇಡೀ ಆತನ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಈತ ಹೇಳುತ್ತಿರುವ ಮಾತುಗಳಲ್ಲಿ ಯಾವುದೇ ಹುರುಳಿಲ್ಲ. ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಬಿಬಿಎಂಪಿ (BBMP) ನೋಡಲ್ ಅಧಿಕಾರಿ ಮರುದಿನವೇ ಎಚ್ಚರಿಸಿದ್ದರು.

About The Author

Leave a Reply

Your email address will not be published. Required fields are marked *