ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಬೃಹತ್ ಗೆಲುವುಗಳು: ರನ್‌ಗಳ ಆಧಾರದ 4 ದೊಡ್ಡ ಗೆಲುವುಗಳ ಪಟ್ಟಿ

1 min read

ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 302 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ರನ್‌ಗಳ ಆಧಾರದಲ್ಲಿ ಅತಿ ದೊಡ್ಡ ಗೆಲುವಿಗಳ ಪೈಕಿ ಒಂದು ಎನಿಸಿಕೊಂಡಿದೆ. 2011ರ ವಿಶ್ವಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ಎರಡು ತಂಡಗಳು ಅದೇ ತಾಣದಲ್ಲಿ ಮುಖಾಮುಖಿಯಾಗಿದ್ದರೂ ಲಂಕಾ ತಂಡ ಈ ಪಂದ್ಯದಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿ ಸೋಲೊಪ್ಪಿಕೊಂಡಿದೆ.

ಮುಂಬೈನ ಅದ್ಭುತವಾದ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಮೊದಲಿಗೆ ಟೀಮ್ ಇಂಡಿಯಾ ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಐಯ್ಯರ್ ಅವರ ಅದ್ಭುತ ಪ್ರದರ್ಶನದಿಂದಾಗಿ 357 ರನ್‌ಗಳನ್ನು ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ತಂಡ ಕೇವಲ 55 ರನ್‌ಗಳಿಗೆ ಆಲೌಟ್ ಆಗಿದೆ. ಏಕದಿನ ಇತಿಹಾಸದಲ್ಲಿ ರನ್‌ಗಳ ಆಧಾರದಲ್ಲಿ ಈ ಗೆಲುವು ನಾಲ್ಕನೇ ಅತ ದೊಡ್ಡ ಗೆಲುವು ಎನಿಸಿಕೊಂಡಿದೆ. ಹಾಗಾಗಿ ಅಗ್ರ ನಾಲ್ಕು ಅತಿ ದೊಡ್ಡ ಗೆಲುವುಗಳ ಮಾಹಿತಿ ಇಲ್ಲಿದೆ.

4. ಶ್ರೀಲಂಕಾ ವಿರುದ್ಧ 302 ರನ್‌ಗಳ ಅಂತರದ ಗೆಲುವು

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ತಂಡವನ್ನು ಭರ್ಜರಿ 302 ರನ್‌ಗಳ ಅಂತರದಿಂದ ಮಣಿಸಿದ್ದು ನಾಲ್ಕನೇ ಅತಿ ದೊಡ್ಡ ಗೆಲುವು ಎನಿಸಿಕೊಂಡಿದೆ. ಟೀಮ್ ಇಂಡಿಯಾದ ವೇಗಿಗಳು ಈ ಪಂದ್ಯದಲ್ಲಿ ಲಂಕಾ ಪಡೆಗೆ ಸಣ್ಣ ಅವಕಾಶವನ್ನು ಕೂಡ ನೀಡಲಿಲ್ಲ. ಅನುಭವಿ ಆಟಗಾರ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ಐದು ವಿಕೆಟ್ ಪಡೆದುಕೊಂಡಿದ್ದು ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

3. ಯುಎಸ್‌ಎಯನ್ನು 304 ರನ್‌ಗಳ ಅಂತರದಿಂದ ಮಣಿಸಿದ ಜಿಂಬಾಬ್ವೆ

ಇನ್ನು ಈ ವರ್ಷದ ಆರಂಭದಲ್ಲಿ ನಡೆದ 2023ರ ವಿಶ್ವಕಪ್‌ನ ಕ್ವಾಲಿಫೈಯರ್ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಯುಎಸ್‌ಎಯನ್ನು 304 ರನ್‌ಗಳಿಂದ ಸೋಲಿಸಿತು. ತವರಿನ ಪರಿಸ್ಥಿತಿಯಲ್ಲಿ ಆಡಿದ ಜಿಂಬಾಬ್ವೆ ಮೊದಲ ಇನ್ನಿಂಗ್ಸ್‌ನಲ್ಲಿ 408 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಅಮೆರಿಕ 104 ರನ್ ಗಳಿಸಲಷ್ಟೇ ಶಕ್ತವಾಯಿತು.

2. ನೆದರ್ಲೆಂಡ್ಸ್‌ಗೆ 309 ರನ್‌ಗಳ ಸೋಲುಣಿಸಿದ ಆಸ್ಟ್ರೇಲಿಯಾ

ಇದೇ ವಿಶ್ವಕಪ್ ಟೂರ್ನಿಯಲ್ಲಿ ಕೆಲವೇ ದಿನಗಳ ಹಿಂದೆ ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ರನ್‌ಗಳ ಆಧಾರದಲ್ಲಿ ಬೃಹತ್ ಅಂತರದ ಗೆಲುವು ಸಾಧಿಸಿದ ದಾಖಲೆ ಬರೆದಿತ್ತು. ನೆದರ್ಲೆಂಡ್ಸ್ ತಂಡವನ್ನು 309 ರನ್‌ಗಳ ಅಂತರದಿಂದ ಸೋಲಿಸಿತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 399 ರನ್ ಗಳಿಸಿದ್ದರೆ ಡಚ್ ತಂಡವನ್ನು 90 ರನ್‌ಗಳಿಗೆ ಆಲೌಟ್ ಮಾಡಿತು.

1. ಶ್ರೀಲಂಕಾ ವಿರುದ್ಧ 317 ರನ್‌ಗಳ ಅಂತರದಿಂದ ಭಾರತಕ್ಕೆ ಗೆಲುವು

ಈ ವರ್ಷದ ಆರಂಭದಲ್ಲಿ ತಿರುವನಂತಪುರದಲ್ಲಿ ನಡೆದ ದ್ವಿಪಕ್ಷೀಯ ಸರಣಿಯ ಮೂರನೇ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಭಾರೀ ಅಂತರದಿಂದ ಮಣಿಸಿದೆ ಏಕದಿನ ಕ್ರಿಕೆಟ್ ಇತಿಹಾಸದ ಅತಿ ದೊಡ್ಡ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 390 ರನ್ ಗಳಿಸಿತು. 391 ರನ್‌ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ಕೇವಲ 73 ರನ್‌ಗಳಿಗೆ ಆಲೌಟ್ ಆಯಿತು.

About The Author

Leave a Reply

Your email address will not be published. Required fields are marked *