24 ಮತಗಳಲ್ಲಿ ತಲಾ 12 ಮತ ಪಡೆದ ಬಿಜೆಪಿ, ಕಾಂಗ್ರೆಸ್
1 min readಕೈ ಜಾರಿದ ದರ್ಗಾಜೋಗಿಹಳ್ಳಿ ಗ್ರಾಪಂ ಬಿಜೆಪಿ ತೆಕ್ಕೆಗೆ
ಲಾಟರಿ ಆಯ್ಕೆಯಲ್ಲಿ ಕಮಲಕ್ಕೆ ಖುಲಾಯಿಸಿದ ಅದೃಷ್ಟ
24 ಮತಗಳಲ್ಲಿ ತಲಾ 12 ಮತ ಪಡೆದ ಬಿಜೆಪಿ, ಕಾಂಗ್ರೆಸ್
ಲಾಟರಿ ಮೂಲಕ ವಿಜೇತರನ್ನ ಘೋಷಿಸಿದ ಚುನಾವಣಾಧಿಕಾರಿ
ದೊಡ್ಡಬಳ್ಳಾಪುರ ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ತೀವ್ರ ಪೈಪೋಟಿ ನಡುವೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭಾಗ್ಯಮ್ಮ 12 ಮತ ಪಡೆದೆರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಶಿಕಲಾ ನಾಗರಾಜು 12 ಮತ ಪಡೆದರು. ಎರಡು ಪಕ್ಷದ ಅಭ್ಯರ್ಥಿಗಳು ಸಮ ಮತ ಪಡೆದ ಕಾರಣ ಲಾಟರಿ ಮೂಲಕ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು.
ದೊಡ್ಡಬಳ್ಳಾಪುರ ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಸಮಾನ ಮತ ಪಡೆದ ಕಾರಣ ಲಾಟರಿ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಶಶಿಕಲಾ ನಾಗರಾಜು, ಉಪಾಧ್ಯಕ್ಷರಾಗಿ ಶೋಭಾಭಾಯಿ ಪ್ರಕಾಶ್ ಆಯ್ಕೆಯಾದರು. ತಾಲ್ಲೂಕು ಕೃಷಿ ಇಲಾಖೆಯ ಎಡಿಎ ರಂಗನಾಥ ಮತ್ತು ಪಿಡಿಒ ಶಿವರಾಜು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷೆ ಶಶಿಕಲಾ ನಾಗರಾಜು ಮಾತನಾಡಿ ಈ ಗೆಲುವಿಗಾಗಿ ಕಳೆದ 12 ವರ್ಷಗಳಿಂದ ಶ್ರಮಿಸಿದ್ದೇನೆ . ಇದು ನನ್ನ ಗೆಲುವಲ್ಲ ಸತ್ಯದ ಗೆಲುವಾಗಿದೆ. ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು. ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಹೆಚ್ಚಿನ ಅನುದಾನ ತರುವ ಮೂಲಕ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್ ಮಾತನಾಡಿ, ಕಾಂಗ್ರೆಸ್ ದುರಾಡಳಿತದ ವಿರುದ್ಧ ಇಂದು ನಮಗೆ ಜಯ ಸಿಕ್ಕಿದೆ, ಸದಸ್ಯರು ಸೂಕ್ತ ವ್ಯಕ್ತಿಗೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಹಿರಿಯರ ಮಾರ್ಗದರ್ಶನ ಹಾಗೂ ಸ್ಥಳೀಯ ಶಾಸಕರಿಂದ ಹೆಚ್ಚಿನ ಅನುದಾನ ತಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ದರ್ಗಾಜೋಗಿಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ. ನೂತನ ಅಧ್ಯಕ್ಷರ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಈ ಗೆಲುವನ್ನು ಸಂಭ್ರಮಿಸಲಾಗುವುದು ಎಂದರು.