ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
1 min readಹಾಲಿನ ಪ್ರೋತ್ಸಾಹಧನ ಬಿಡುಗಡೆಗೆ ಬಿಜೆಪಿ ಒತ್ತಾಯ
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
ಹಾಲಿನ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ ಮುಂಭಾಗ ಇಂದು ಪ್ರತಿಭಟನೆ ಮಾಡಲಾಯಿತು.
ಹಾಲಿನ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ ಮುಂಭಾಗ ಇಂದು ಪ್ರತಿಭಟನೆ ಮಾಡಲಾಯಿತು. ಹಸುಗಳೊಂದಿಗೆ ತಾಲೂಕು ಕಚೇರಿ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಬೃಂಗೇಶ್ ಮಾತನಾಡಿ, ಬೆಲೆ ಏರಿಕೆಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮೇಲೆ ದುಷ್ಪರಿಣಾಮ ಬೀರುವ ನೀತಿಯನ್ನು ಸರ್ಕಾರ ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸ್ಥಗಿತಗೊಂಡಿರುವ ಕಿಸಾನ್ ಸಮ್ಮಾನ್ ನಿಧಿಯಡಿ ರೈತರಿಗೆ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಸರ್ಕಾರ ಪ್ರಾರಂಭಿಸಬೇಕು. ಕಳೆದ ಎಂಟು ತಿಂಗಳಿನಿoದ 957 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನ ಬಾಕಿಯಿದ್ದು, ರೈತರ ಹಿತದೃಷ್ಟಿಯಿಂದ ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಇಂಧನ ಬೆಲೆ, ಹಾಲಿನ ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಹೊರೆ ಏರಿಸುತ್ತಿದೆ. ಅಲ್ಲದೆ ರೈತರಿಗೆ ನೀಡುತ್ತಿದ್ದ ಅನೇಕ ಯೋಜನೆಗಳನ್ನು ನಿಲ್ಲಿಸುವ ಮೂಲಕ ರೈತರ ಹೊಟ್ಟೆ ಒಡೆಯುವ ಕೆಲಸಕ್ಕೆ ಮುಂದಾಗಿದೆ. ಇಂತಹ ಜನ ವಿರೋಧಿ ನೀತಿಗಳನ್ನು ಕೈ ಬಿಟ್ಟು, ಕೂಡಲೇ