BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ
1 min readವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಈ ಹಿಂದೆ ಹೇಳಲಾಗಿತ್ತು ಆದರೆ ಇದೀಗ 3 ತಿಂಗಳ ಅವಧಿ ವಿಸ್ತರಣೆ ಮಾಡ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡ್ತೀವಿ ಎಂದು ಮಧು ಮಾದೇಗೌಡ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದ್ದಾರೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnews