“ಜನವರಿ 22ರಂದು ದೀಪಾವಳಿ ಆಚರಿಸಿ” : ದೇಶದ 140 ಕೋಟಿ ಭಾರತೀಯರಿಗೆ ‘ಪ್ರಧಾನಿ ಮೋದಿ’ ಮನವಿ
1 min readಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ಘಾಟನೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ಆಗಮಿಸಿದ್ದು, ನೂತನವಾಗಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದರು.
ನಂತ್ರ ಅಯೋಧ್ಯೆಯಲ್ಲಿ ಮೆಗಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, 2024ರ ಜನವರಿ 22 ರಂದು ರಾಮ ಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಕ್ಷಣಕ್ಕಾಗಿ ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದೆ ಎಂದು ಹೇಳಿದರು. ಇನ್ನು ಜನವರಿ 22ರಂದು 140 ಕೋಟಿ ಭಾರತೀಯರು ದೀಪಗಳ ಹಬ್ಬವಾಗಿ ಆಚರಿಸಬೇಕು ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪ್ರಧಾನಿ ನಗರದ ಮೂಲಕ ಮೆಗಾ ರೋಡ್ ಶೋ ನಡೆಸಿದ ನಂತರ ನವೀಕರಿಸಿದ ರೈಲ್ವೆ ನಿಲ್ದಾಣವನ್ನ ಉದ್ಘಾಟಿಸಿದ್ದರು.
ಇಂದು ಇಡೀ ಜಗತ್ತು ಜನವರಿ 22ರ ಐತಿಹಾಸಿಕ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದೆ, ಅಂತಹ ಪರಿಸ್ಥಿತಿಯಲ್ಲಿ ಅಯೋಧ್ಯೆಯ ಜನರಲ್ಲಿ ಈ ಉತ್ಸಾಹವು ತುಂಬಾ ಸಹಜವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇನ್ನು “ನಾನು ಭಾರತದ ಪ್ರತಿಯೊಂದು ಮಣ್ಣಿನ ಕಣ ಮತ್ತು ಜನರ ಆರಾಧಕ. ನನಗೂ ನಿಮ್ಮಷ್ಟೇ ಕುತೂಹಲವಿದೆ” ಎಂದರು.
ಪ್ರಧಾನಿ ಮೋದಿ ಅವರು 15 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಅಯೋಧ್ಯೆಯ ಜನತೆಯನ್ನು ಪ್ರಧಾನಿ ಅಭಿನಂದಿಸಿದ್ದಾರೆ. ನಾವು ನಮ್ಮ ಪರಂಪರೆಯನ್ನು ಗುರುತಿಸಬೇಕು ಎಂದು ಪ್ರಧಾನಿ ಹೇಳಿದರು. ನಮ್ಮ ಪರಂಪರೆ ನಮಗೆ ಸ್ಫೂರ್ತಿ ನೀಡುತ್ತದೆ. ಇದೇ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಗುಡಾರದಲ್ಲಿ ಕುಳಿತಿದ್ದ ಕಾಲವಿತ್ತು ಮತ್ತು ಇಂದು ರಾಮ ಲಲ್ಲಾ ಮಾತ್ರವಲ್ಲ, ದೇಶದ ನಾಲ್ಕು ಕೋಟಿ ಬಡವರಿಗೂ ಶಾಶ್ವತ ಮನೆ ಸಿಕ್ಕಿದೆ ಎಂದು ಪ್ರಧಾನಿ ಹೇಳಿದರು.