ಚಿತ್ರರಂಗಕ್ಕೆ ದಾಸನ ಎಂಟ್ರಿಗೆ 25 ವರ್ಷಗಳ ಸಂಭ್ರಮ: ಅದ್ಧೂರಿ ಕಾರ್ಯಕ್ರಮಕ್ಕೆ ಸಜ್ಜಾದ ವೇದಿಕೆ
1 min readಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಹಮ್ಮಿಕೊಂಡಿದ್ದಾರೆ.
ಈ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ನೆರವೇರಲಿದೆ.
ಫೆಬ್ರವರಿ 17ರ ಶನಿವಾರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ-25 ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀರಂಗಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ನಡೆಯಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜೊತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ.
ವಿನೋದ್ ರಾಜ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ನೃತ್ಯ ಮಾಡಲಿದ್ದಾರೆ.
ಇವುಗಳ ಜೊತೆಗೆ ಮತ್ತಷ್ಟು ಸಾಮಾಜಿಕ ಕಾರ್ಯಕ್ರಮಗಳು ಇದ್ದು ಇವುಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/