ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಂಭ್ರಮಾಚರಣೆ
1 min readಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಂಭ್ರಮಾಚರಣೆ
ಮು0ದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಚಿಂತಾಮಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸಿದರು.
ಚಿ0ತಾಮಣಿ ನಗರದ ಮಾಲಪಲ್ಲಿ ಬಡಾವಣೆಯಲ್ಲಿರುವ ಸಚಿವ ಡಾ.ಎಂ ಸಿ ಸುಧಾಕರ್ ಅವರ ಅಂಜನಿ ನಿವಾಸದ ಮುಂದೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ನಗರದ ಮುಖ್ಯ ರಸ್ತೆಗಳಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಬೈಕ್ ಮೆರವಣಿಗೆ ನಡೆಸಿ, ನಗರಸಭೆ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಗರಸಭೆ ಅಧ್ಯಕ್ಷ ಜಗನ್ನಾಥ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ೫ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಿ, ಜನರಿಗೆ ತಲುಪಿಸುತ್ತಿದೆ. ಮುಂದೆ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರುಗಮಲ್ಲ ಲಕ್ಷಿ ನಾರಾಯಣರೆಡ್ಡಿ ಮಾತನಾಡಿ, ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಚನ್ನಪಟ್ಟಣ ಸೇರಿದಂತೆ ಸಂಡೂರು. ಶಿಗ್ಗಾವಿ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಕಾಂಗ್ರೆಸ್ ಜಯಗಳಿಸಿದೆ ಎಂದರು.
ಕರ್ನಾಟಕದಲ್ಲಿ 2028 ರಲ್ಲಿ ನಡೆಯಲಿರುವ ವಿಭಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತಗಳಿಸಲು ಈ ಪಲಿತಾಂಶ ದಿಕ್ಸೂಚಿಯಾಗಿದೆ. ಬಿಜೆಪಿ ಸುಳ್ಳು ಆರೋಪಗಳು ಪ್ರಚಾರ ಮಾಡುವುದನ್ನು ಬಿಟ್ಟು, ಕಾಂಗ್ರೆಸ್ಸಿಗೆ ಹಿತವಚನ ನೀಡಬೇಕು. ಸಚಿವ ಎಂ. ಸಿ. ಸುಧಾಕರ್ ಚಿಂತಾಮಣಿ ಕ್ಷೇತ್ರ ಅಲ್ಲದೆ ರಾಜ್ಯದ ಎಲ್ಲೆಡೆ ಅಭಿವೃದ್ಧಿ ಕಾರ್ಯಗಳು ಮಾಡುತ್ತಿದ್ದಾರೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು. ನಗರ ಯೋಜನಾ ಪ್ರಾಧಿಕಾರದ ಸದಸ್ಯ ಆರ್. ಎಂ. ಜೆ. ಶ್ರೀನಿವಾಸ್. ನಗರ ಸಭೆ ಸದಸ್ಯ ಹರೀಶ್. ಜಗದೀಶ್, ಸ್ಕೂಲ್ ಸುಬ್ಬಾರೆಡ್ಡಿ. ಜಿ. ಇ. ಜಯರಾಮರೆಡ್ಡಿ. ಉಮೇಶ್ ಇದ್ದರು