ಕೇಂದ್ರ ಬರ ಅಧ್ಯಯನ ತಂಡದಿAದ ಪರಿಶೀಲನೆ.
1 min read
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.
ಬರ ಪರಿಶೀಲನೆಗಾಗಿ ಆಗಮಿಸಿರುವ ಕೇಂದ್ರ ತಂಡವು ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬAಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮೊದಲಿಗೆ ವಿಶ್ವನಾಥಪುರ ಬಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆಹಾನಿಯನ್ನು ವೀಕ್ಷಿಸಿದರು. ಈ ಸಮಯದಲ್ಲಿ ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡರು. ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದರು. ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ವಿವಸಿರುತ್ತಾರೆ.
ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ಎಂ.ಎನ್.ಸಿ.ಎಫ್.ಸಿ ಯ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ತಂಡದಲ್ಲಿದ್ದರು.