ಅಮಿತ್ ಶಾ ಹೇಳಿಕೆಗೆ ಛಲವಾದಿ ಸಂಘ ಖಂಡನೆ
1 min read
ಅಮಿತ್ ಶಾ ಹೇಳಿಕೆಗೆ ಛಲವಾದಿ ಸಂಘ ಖಂಡನೆ
ಕೂಡಲೇ ಕ್ಷಮೆ ಯಾಚಿಸಲು ನಾಯಕರ ಒತ್ತಾಯ
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯಿಂದ ಅಂಬೇಡ್ಕರ್ ಅನುಯಾಯಿಗಳಿಗೆ ಮಾತ್ರವಲ್ಲದೆ ದೇಶದ ಪ್ರಜೆಗಳಿಗೂ ನೋವುಂಟು ಮಾಡಿದೆ ಎಂದು ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ್ ಹೇಳಿದರು.
ಚಿಕ್ಕಬಳ್ಳಾಪುರ ಪತ್ರಕರ್ತರ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ್, ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿ0ದಲೇ ಸಂಸದರಾಗಿ, ಸಚಿವರಾಗಿ ಎಲ್ಲವನ್ನೂ ಮರೆತು ಸಂಸತ್ ಭವನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ನಿಮ್ಮ ಸ್ಥಾನಕ್ಕೆ ಕೊಡಲೆ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವರು ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಕೂಡಲೇ ಅಮಿತ್ ಶಾ ಕ್ಷಮೆಯಾಚಿಸಬೇಕು, ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ತೀವ್ರ ರೂಪ ಪಡೆಯಲಿದೆ. ದೇಶದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹೇಳಿಕೆಗಳನ್ನು ಯಾರೂ ನೀಡಬಾರದು. ಅಂಬೇಡ್ಕರ್ ಬಗ್ಗೆ ಹೀನಾಯ ವಾಗಿ ಮಾತನಾಡಿದರೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರೆ ಚೀಮಾರಿ ಹಾಕುತ್ತಾರೆ ಎಂದರು.
ಸ0ವಿಧಾನದ ಆಶಯದಂತೆ ಚುನಾಯಿತ ಪ್ರತಿನಿಧಿಗಳು ನಡೆದುಕೊಂಡು ಜನಸಾಮಾನ್ಯರಿಗೆ ತಲುಪಬೇಕಾದ ಸೌಲಭ್ಯಗಳನ್ನು ಒದಗಿಸಬೇಕು, ಸಂವಿಧಾನಕ್ಕೆ ದಕ್ಕೆ ತರುವಂತೆ ನಡೆದುಕೊಳ್ಳಬಾರದು ಎಂದರು. ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಜಿ ಸಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷ ತಾಲ್ಲೂಕು ಅಧ್ಯಕ್ಷ ಪಿ.ವಿ. ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಪ್ರಕಾಶ್ ಇದ್ದರು.