ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಮೋಸ
1 min readರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಮೋಸ
ವಿವಿಧ ನಿಗಮಗಳಿಗೆ ನೀಡಬೇಕಾದ ಅನುದಾನದಲ್ಲಿ ಕಡಿತ
ಗ್ಯಾರೆಂಟಿಗಳಿಗೆ ಹಣ ತುಂಬಲು ನಿಗಮಗಳಿಗೆ ಕೊಕ್ಕೆ
ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಅಹಿಂದ ವರ್ಗಗಳ ಅಭಿವೃದ್ಧಿ ಹೆಸರಿನಲ್ಲಿ ಅವರ ಮತ ಪಡೆದು, ಅಹಿಂದ ವರ್ಗಗಳ ಕಲ್ಯಾಣಕ್ಕಾಗಿ ಇರುವ ನಿಗಮಗಳಿಗೆ ಅನುದಾನ ಕಡಿತ ಮಾಡುವ ಮೂಲಕ ಹಿಂದುಳಿದ ವರ್ಗಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೀರದ ಮೋಸ ಎಸಗಿದೆ ಎಂದು ಆರೋಪಿಸಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಇಂದು ಪ್ರತಿಭಟನೆ ನಡೆಸಿ ಮಾತನಾಡಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನೇಯ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನವನನು ಬಹುತೇಕ ಸ್ಥಗಿತಗೊಳಿಸಿದೆ. ನೆಪ ಮಾತ್ರಕ್ಕೆ ಎಂಬ0ತೆ ಅನುದಾನ ನೀಡಿದ್ದು, ಬಜೆಟ್‌ನಲ್ಲಿ ಘೋಷಣೆ ಮಾಡಿದ ಮೊತ್ತಕ್ಕೂ, ನೀಡಿರುವ ಅನುದಾನ ಅಜಗಂಜಾ0ತರ ವ್ಯತ್ಯಾಸವಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಈ ಕ್ರಮದಿಂದ ಹಿಂದುಳಿದ, ಅಲೆಮಾರಿ, ಸಮುದಾಯಗಳಿಗೆ ತೀವ್ರ ಅನ್ಯಾಯವಾಗಿದ್ದು, ಸ್ವ ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸೇರಿದಂತೆ ಇತರೆ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ಹಣ ಹೊಂದಿಸಲು ನಿಗಮಗಳಿಗೆ ನೀಡುತ್ತಿದ್ದ ಅನುದಾನ ಕಡಿತಗೊಳಿಸಿ, ಹಿಂದುಳಿದವರ ಅಭಿವೃದ್ಧಿಯನ್ನು ಅಂಧಕಾರಕ್ಕೆ ತಳ್ಳಿದೆ ಎಂದು ಆರೋಪಿಸಿದರು.
ತಮ್ಮ ರಾಜಕಾಯ ಸ್ವಾರ್ಥಕ್ಕಾಗಿ ಅಹಿಂದ ಮಂತ್ರ ಪಠಿಸುವ ಸಿದ್ದರಾಮಯ್ಯ ಹಿಂದುಳಿದ ಸಮುದಾಯಗಳ ಕಲ್ಯಾಣ ಯೋಜನೆಗಳಿಗೆ ಕಲ್ಲು ಹಾಕಿದ್ದಾರೆ. ವಿವಿಧ ನಿಗಮಗಳಿಗೆ ನೀಡಬೇಕಾದ ಹಣ ನೀಡುವ ಮೂಲಕ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿ ಡಿಸೆಂಹರ್ 12ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಗೆ ಹಿಂದುಳಿದ ಸಮುದಾಯಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಕೋರಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪತಿ ಮಾತನಾಡಿ, ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಎಲ್ಲ ಅಭಿವೃದ್ಧಿ ನಿಗಮಗಳಿಗೆ 546 ಕೋಟಿ ಅನುದಾನ ಬಿಡುಗಡೆ ಮಾಡಿದ್ದರೆ, 2023ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ 1,600 ಕೋಟಿ ನೀಡುವುದಾಗಿ ಬಜೆಟ್‌ನಲ್ಲಿ ಭರವಸೆ ನೀಡಿ, ಕೇವಲ ೩೪೭ ಕೋಟಿ ಅನುದಾನ ಮಾತ್ರ ಬಿಡುಗಡೆ ಮಾಡಿದೆ. ಇದೇನಾ ನುಡಿದಂತೆ ನಡೆಯುವ ಸರ್ಕಾರ ಎಂದು ಪ್ರಶ್ನಿಸಿದರು.
ದೇವರಾಜ ಅರಸು ನಿಗಮಕ್ಕೆ 50 ಕೋಟಿ, ವಿಶ್ವಕರ್ಮ ನಿಗಮಕ್ಕೆ 6.5 ಕೋಟಿ, ಅಂಬಿಗರ ಚೌಡಯ್ಯ ನಿಗಮಕ್ಕೆ 4.5 ಕೋಟಿ, ಸವಿತಾ ಸಮಾಜದ ನಿಗಮಕ್ಕೆ 2.5 ಕೋಟಿ, ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 6 ಕೋಟಿ, ಮಡಿವಾಳ ನಿಗಮಕ್ಕೆ 4.5 ಕೋಟಿ, ಕಾಡುಗೊಲ್ಲ ನಿಗಮಕ್ಕೆ 7.5 ಕೋಟಿ, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 30 ಕೋಟಿ, ಮರಾಠ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ನೀಡಲಾಗಿದೆ. ಆದರೆ ಇದರಲ್ಲಿ ಕೇವಲ 57 ಕೋಟಿ ಮಾತ್ರ ವೆಚ್ಚ ಮಾಡಲಾಗಿದ್ದು, 112 ಕೋಟಿ ಹಾಗೆಯೇ ಉಳಿದಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಅಹಿಂದ ವರ್ಗಗಳ ಮೇಲಿನ ಪ್ರೀತಿ ಎಂದು ಅವರು ಲೇವಡಿ ಮಾಡಿದರು. ಪ್ರತಿಭಟನೆಯಲ್ಲಿ ಬಿಜೆಪಿಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್, ಕಾರ್ಯಕಾರಿಣಿ ಸದಸ್ಯ ಕೊಂಡಪ್ಪ ಇದ್ದರು.