ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಜಿಲ್ಲಾಡಳಿತ ಭವನದ ಮುಂದೆ ಅಧಿಕಾರಿಗಳಿಂದ ಸ್ವಚ್ಛತಾಕಾರ್ಯ

1 min read

ಜಿಲ್ಲಾಡಳಿತ ಭವನದ ಮುಂದೆ ಅಧಿಕಾರಿಗಳಿಂದ ಸ್ವಚ್ಛತಾಕಾರ್ಯ

ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಪಂ ಸಿಇಒ ಭಾಗಿ

ಸ್ವಚ್ಛತೆ ಕಾಪಾಡುವ ಜೊತೆಗೆ ಗಿಡ ನೆಡಲು ಡಿಸಿ ಕರೆ

ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಸರ್ಕಾರ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ-2024 ಅಂಗವಾಗಿ ಇಂದು ಬೆಳಿಗ್ಗೆ ಜಿಲ್ಲಾಡಳಿತ ಭವನದ ಆವರಣ ಹಾಗೂ ಸುತ್ತಲಿನ ಪ್ರದೇಶವನ್ನು ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ನೇತೃತ್ವದಲ್ಲಿ ಸ್ವಚ್ಛ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಈ ವೇಳೆ ಜಿಲ್ಲಾಡಳಿತ ಭವನದ ಮುಂದೆ ಬಿಸಾಡಿರುವ ಕಸ ಸ್ವತಃ ಜಿಲ್ಲಾಧಿಕಾರಿಗಳು ಪೊರಕೆ ಹಿಡಿದು ಸ್ವಚ್ಚತೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಡಿ ಅಮ್ಮನ ಹೆಸರಿನಲ್ಲಿ ಪ್ರತಿಯೊಬ್ಬರೂ ತಮ್ಮ ಕಚೇರಿಗಳ ಮುಂದೆ ಗಿಡ ನೆಡುವುದು. ಮನೆಯ ಸುತ್ತಮುತ್ತಲಿನಲ್ಲಿ ಸ್ವಚ್ಚತೆಯಿಂದ ಕಾಪಾಡಿಕೊಂಡರೆ ಯಾವುದೇ ಕಾಯಿಲೆಗಳು, ರೋಗಗಳು ಬರುವುದಿಲ್ಲ. ಅಮ್ಮನ ಹೆಸರಿನಲ್ಲಿ ತಮ್ಮ ಕಚೇರಿ ಆವರಣದಲ್ಲಿ ಒಂದು ಗಿಡ ನೆಡುವುದರಿಂದ ಮುಂದಿನ ಪೀಳಿಗೆಗೂ ಉತ್ತಮವಾಗುತ್ತದೆ. ಗಿಡ ಮರಗಳನ್ನು ಬೆಳೆಸುವುದು ಅರಣ್ಯವನ್ನು ನಾಶ ಮಾಡದೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಯನಿರ್ವಾಹಣಾದಿಕಾರಿ ಪ್ರಕಾಶ್ ನಿಟ್ಟಾಲಿ ಮಾತನಾಡಿ.. ಸರ್ಕಾರದ ಆದೇಶದಂತೆ ಸ್ವಚ್ಛತಾ ಕಾರ್ಯಕ್ರಮ ಮಾಡುತ್ತಿದ್ದು.. ಮೊದಲಿಗೆ ಜಿಲ್ಲಾಡಳಿತ ಕಛೇರಿ ಮುಂದೆ ಗಡ್ಡೆ ಹಾಕಿರುವ ಬೃಹತ್ ಕಸವನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಇದರಲ್ಲಿ  ಪಂಚಾಯತಿ ಅಧಿಕಾರಿಗಳು, ಇನ್ನಿತರ ಅಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ ಎಂದರು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಡಿಸಿ ಭಾಸ್ಕರ್, ಜಿಲ್ಲಾ ಆರೋಗ್ಯದಿಕಾರಿ ಡಾ. ಮಹೇಶ್, ಇಒ ಮಂಜುನಾಥ್, ನಗರಸಭೆ ಪೌರಾಯುಕ್ತ ಉಮಾಶಂಕರ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

 

About The Author

Leave a Reply

Your email address will not be published. Required fields are marked *