ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು
1 min readಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಆಗ್ರಹಿಸಿದರು. ನಂಜನಗೂಡು ತಾಲ್ಲೂಕು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ಬಂದು ಒಂದು ವರ್ಷ ಕಳೆಯುವುದರ ಒಳಗಾಗಿ ಹಗರಣಗಳ ಸರಮಾಲೆಯೇ ನಡೆಸಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಆಗ್ರಹಿಸಿದರು. ನಂಜನಗೂಡು ತಾಲ್ಲೂಕು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮೈಸೂರಿನ ಮುಡ ಹಗರಣ, ವಾಲ್ಮೀಕಿ ಅಭಿವೃದ್ಧಿ ಹಗರಣ ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್.ಪಿ, ಟಿ ಎಸ್ ಪಿ ಯೋಜನೆ ಅನುದಾನ ದುರ್ಬಳಕೆ ಸೇರಿದಂತೆ ಸಾಕಷ್ಟು ಹಗರಣಗಳನ್ನು ನಡೆಸಿದ್ದಾರೆ. ಅಹಿಂದ ನಾಯಕ ಎಂದು ಹೆಸರೇಳಿಕೊಂಡು ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಪಂಗ ನಾಮ ಹಾಕಲು ಮುಂದಾಗಿದ್ದಾರೆ. ಇದನ್ನು ಖಂಡಿಸಿ ಈಗಾಗಲೇ ರಾಜ್ಯದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಿ0ದ ಮೈಸೂರಿನವರೆಗೂ ಕಾಲ್ನಡಿಗೆ ಜಾಥಾ ನಡೆಸಲಾಗುತ್ತಿದೆ ಎಂದರು.
ಜೊತೆಗೆ ಆಗಸ್ಟ್ 10 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಈ ಸಮಾವೇಶಕ್ಕೆ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ಹೆಚ್ಚು ಕಾರ್ಯಕರ್ತರು ಮತ್ತು ಮುಖಂಡರು ಭಾಗಿಯಾಗಿ ಯಶಸ್ವಿಗೊಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನಂಜನಗೂಡು ಕ್ಷೇತ್ರದವರೇ ಆದ ಡಾ.ಹೆಚ್. ಸಿ ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾರೆ. ಹೊಸ ಯೋಜನೆಗಳನ್ನು ಜಾರಿ ಮಾಡಿ ಜನರ ಅಭಿವೃದ್ಧಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು..
ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ. ಅದರ ವಿರುದ್ಧ ದೊಡ್ಡ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆಂಡಗಣಪ್ಪ, ನಗರ ಅಧ್ಯಕ್ಷ ಸಿದ್ದರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕರಂಗನಾಯಕ, ಮಾಜಿ ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಶ್ರೀನಿವಾಸರೆಡ್ಡಿ, ಬಾಲಚಂದ್ರ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು.