ಕಾಂಗ್ರೆಸ್ ದಲಿತ ವಿರೋಧಿ ಸರ್ಕಾರವಾಗಿದೆ
1 min readಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರಪ್ಪ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದರು.
ಈ ವೇಳೆ ಮಾತನಾಡಿದ ಅವರು, ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮರ್ಯಾದಾಗೇಡು ಹತ್ಯೆಗಳು ನಡೆಯುತ್ತಿವೆ. ದಲಿತ ಸಮುದಾಯದ ಡಾ.ಜಿ.ಪರಮೇಶ್ವರ ಗೃಹ ಸಚಿವರಾಗಿದ್ದರೂ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ದೂರಿದರು.
ಕಾಂಗ್ರೆಸ್, ದಲಿತರ ಪರವಾಗಿ ಇಲ್ಲ. ದಲಿತರ ಕಲ್ಯಾಣಕ್ಕೆ ಮೀಸಲಾಗಿದ್ದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿಗಳಿಗಾಗಿ ಬಳಕೆ ಮಾಡಿದ್ದಾರೆ. ಇದರಿಂದ ದಲಿತರ ಕಾಲೊನಿಗಳು ಅಭಿವೃದ್ಧಿ ಆಗುತ್ತಿಲ್ಲ. ಸಮಾಜ ಕಲ್ಯಾಣ ಸಚಿವರು ಸಹ ದಲಿತರಾಗಿದ್ದರೂ ಅಸಹಾಯಕರಾಗಿ ಇದ್ದಾರೆ ಎಂದು ಆರೋಪಿಸಿದರು.
ಈ ಎಲ್ಲ ವಿಚಾರಗಳ ಚರ್ಚೆ ಹಿನ್ನೆಲೆಯಲ್ಲಿ ನ.೮ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ರಾಜ್ಯದ ಮಟ್ಟದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರತ್ನಮ್ಮ, ದಸಂಸ ಪದಾಧಿಕಾರಿಗಳಾದ ಶ್ರೀನಿವಾಸ, ರಾಜಣ್ಣ, ಮುನಿರಾಜು ಮರಸನಹಳ್ಳಿ ಇತರರು ಇದ್ದರು.