ಚಿಕ್ಕಬಳ್ಳಾಪುರದಲ್ಲಿ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
1 min readಚಿಕ್ಕಬಳ್ಳಾಪುರದಲ್ಲಿ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ರಾಜ್ಯಪಾಲರ ಭಾವಚಿತ್ರಕ್ಕೆ ಮಸಿ ಬಳಿದು ಹೋರಾಟ
ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು
ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿ0ದ ಪ್ರತಿಭಟನೆ ನಡೆಸಲಾಯಿತು.
ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿ0ದ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಈಗಾಗಲೇ ರಾಜಕೀಯ ಚರ್ಚೆಯಲ್ಲಿರುವ ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಇಂದು ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿ0ದ ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣಮಂಟಪದಿ0ದ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ದ ಆಕ್ರೋಶ ಹೊರಹಾಕಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾವ ಚಿತ್ರಕ್ಕೆ ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಬಾಯಿ ಬಡಿದುಕೊಂಡು ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವ ಎಂ ಸಿ ಸುಧಾಕರ್ ರಾಜ್ಯಪಾಲರು ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶದ ನುಡಿಗಳನ್ನಾಡಿದರು.
ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ ಮಾತನಾಡಿ, ರಾಜ್ಯದಲ್ಲಿ ಜನರ ಮನ ಗೆದ್ದ ಏಕೈಕ ರಾಜಕಾರಣಿ ಸಿಎಂ ಸಿದ್ದರಾಯಮ್ಯ, ಅವರ ೪೫ ವರ್ಷದ ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ, ಅಂತಹವರ ವಿರುದ್ಧ ರಾಜ್ಯಪಾಲರು ತೇಜೋವಧೆ ಮಾಡಲು ಮುಂದಾಗಿದ್ದಾರೆ. ಕೆಂದ್ರ ಸರಕಾರದ ನೀತಿಗಳನ್ನಾ ಖಂಡಿಸುವ ಧೈರ್ಯ ಇದ್ದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ, ಹೀಗಾಗಿ ಇವರನ್ನು ತುಳಿಯುವ ಪ್ರಯತ್ನದ ಭಾಗವಾಗಿ ಮುಡಾ ಪ್ರಕರಣದಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಈ ಕೆಲಸ ಮಾಡಿಸಿರುವುದು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ವಿ. ಮುನಿಯಪ್ಪ, ಎಸ್.ಎಂ ಮುನಿಯಪ್ಪ, ಬಚ್ಚೇಗೌಡ, ಎಂ.ಆರ್.ಸೀತಾರಾ0, ರಾಜೀವ್ ಗೌಡ, ಪುಟ್ಟು ಅಂಜಿನಪ್ಪ ಇದ್ದರು.