ಅರಸೀಕೆರೆ ನಗರಸಭೆಯಲ್ಲಿ ಕಾಂಗ್ರೆಸ್ ಗೆಲುವು
1 min readಅರಸೀಕೆರೆ ನಗರಸಭೆಯಲ್ಲಿ ಕಾಂಗ್ರೆಸ್ ಗೆಲುವು
8 ವಾರ್ಡುಗಳಿಗೆ ನಡೆದ ಉಪ ಚುನಾವಣೆ
7ರಲ್ಲಿ ಕಾಂಗ್ರೆಸ್, ಒಂದರಲ್ಲಿ ಪಕ್ಷೇತ್ರ ಗೆಲುವು
ಅರಸೀಕೆರೆ ನಗರಸಭೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 8 ವಾರ್ಡುಗಳಿಗೆ ನಡೆದ ಚುನಾವಣಯೆಲ್ಲಿ 7ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಒಂದರಲ್ಲಿ ಪಕ್ಷೇತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಭಾರೀ ಪೈಪೋಟಿ ಇದ್ದ ನಗರ ಸಭೆಯ ಎಂಟು ವಾರ್ಡ್ ಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಏಳು ಮಂದಿ ಕಾಂಗ್ರೆಸ್, ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಯುವರಾಜ್, ದರ್ಶನ್, ಅವಿನಾಶ್, ರೇವಣ್ಣ, ಯೋಗೀಶ್, ಪಲ್ಲವಿ, ಗುಲ್ಜರಾ ಬಾನು ಗೆಲುವು ಸಾಧಿಸಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಇಮ್ರಾನ್ ಖಾನ್ ಗೆಲುವು ಸಾಧಿಸಿದರು.
ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಶಾಸಕ ಕೆಎಂ ಶಿವಲಿಂಗೇಗೌಡ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದ ನೂತನ ಸದಸ್ಯರು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸುವ ಮೂಲಕ ಸಂತಸ ಹಂಚಿಕೊ0ಡರು. ಈ ವೇಳೆ ಮಾತನಾಡಿದ ಶಾಸಕ ಕೆ,ಎಂ ಶಿವಲಿಂಗೇಗೌಡ, ಕ್ಷೇತ್ರದ ಜನತೆ ಪ್ರಜ್ಞಾವಂತರಿದ್ದು, ಅಭಿವೃದ್ಧಿಪರ ನಿಲುವು ಹೊಂದಿರುವುದರಿ0ದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಗೆಲುವು, ಈಗ ನಗರಸಭೆಯ ಉಪಚುನಾವಣೆ ಲಿತಾಂಶ ಸಾಕ್ಷಿಯಾಗಿದೆ ಎಂದರು.
ವಿಜಯೋತ್ಸವ ಮೆರವಣಿಗೆಯಲ್ಲಿ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಣಾವರ ಶ್ರೀನಿವಾಸ್ ಮೆಟ್ರೋ ಬಾಬು, ಗಂಜಿಗೆರೆ ಚಂದ್ರಶೇಖರ್, ನಗರ ಸಭೆ ಸದಸ್ಯ ವೆಂಕಟಮನಿ ಇದ್ದರು.