ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ಸಿಗರ ಪ್ರತಿಭಟನೆ
1 min readರಾಜ್ಯಪಾಲರ ವಿರುದ್ಧ ಕಾಂಗ್ರೆಸ್ಸಿಗರ ಪ್ರತಿಭಟನೆ
ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರತಿಭಟನೆಯಲ್ಲಿ ಭಾಗಿ
ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ, ನಂಜನಗೂಡು ಮತ್ತು ವರುಣಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಸಾಕಷ್ಟು ಮುಖಂಡರು ಮತ್ತು ಕಾರ್ಯಕರ್ತರು ಜಮಾಯಿಸಿ ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆಗಳ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಪಿತೂರಿಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಆಡಳಿತ ಕಾರ್ಯವೈಖರಿ ಹತ್ತಿಕ್ಕಲು ಪಿತೂರಿ ನಡೆಸಿ. ಅನುಮತಿ ನೀಡಲಾಗಿದೆ ಎಂದು ಆರೋಪಿಸಿದರು.
ರಾಜ್ಯಪಾಲರ ಮುಖಾಂತರ ಇಲ್ಲಸಲ್ಲದ ಕಾನೂನು ಬಾಹಿರ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಇದಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ತಪ್ಪು ಮಾಡದ ಪ್ರಾಮಾಣಿಕ ರಾಜಕಾರಣಿ ಯಾವಾಗಲೂ ಬಡ ಜನರ ಸೇವೆ ಮತ್ತು ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸಿ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಕೋಟ್ಯಂತರ ಜನರ ಪಾಲಿಗೆ ಸಹಕಾರಿಯಾಗಿದೆ ಎಂದರು.
ಇದನ್ನೆಲ್ಲಾ ಹತ್ತಿಕುವ ಸಲುವಾಗಿ ಬಿಜೆಪಿ ರಾಜ್ಯಪಾಲರ ಮೂಲಕ ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡಲು ಮುಂದಾಗಿದೆ. ಇದಕ್ಕೆಲ್ಲ ರಾಜ್ಯದ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಶಾಸಕ ದರ್ಶನ್ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದರು. ಪ್ರತಿಭಟನೆ ವೇಳೆ ಶಾಸಕ ದರ್ಶನ್ ಧ್ರುವ ನಾರಾಯಣ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷ ಕೆಜಿ ಮಹೇಶ್, ಶಂಕರ್, ಶ್ರೀಕಂಠ ನಾಯಕ, ರಂಗಸ್ವಾಮಿ ಕೆ ಮಾರುತಿ ಇದ್ದರು.