ಗುಡಿಬಂಡೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ
1 min read
ಗುಡಿಬಂಡೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ
ನೆರದಿದ್ದವರಿಗೆಲ್ಲ ಸಂವಿಧಾನ ಪ್ರತಿಜ್ಞಾ ವಿಧಿ ಬೋಧನೆ
ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಮಾತನಾಡಿದ ದಲಿತ ಮುಖಂಡ ಈಶ್ವರಪ್ಪ, ಜಗತ್ತಿನ ಎಲ್ಲ ಸಂವಿಧಾನಗಳಿಗಿAತ ಭಾರತ ಸಂವಿಧಾನ ಶ್ರೇಷ್ಟ ಸಂವಿಧಾನವಾಗಿದೆ. ಸಂವಿಧಾನ ರಚಿಸುವಲ್ಲಿ ಶ್ರಮ ವಹಿಸಿದ ಅಂಬೇಡ್ಕರ್ ಸೇರಿದಂತೆ ಎಲ್ಲರಿಗೂ ಚಿರಋಣಿಯಾಗಿದ್ದೇವೆ. ಸಂವಿಧಾನದ ಮೂಲಕ ಸಾಮಾಜಿಕ ಪಿಡುಗುಗಳಾದ ಬಾಲ್ಯವಿವಾಹ, ಜಾತಿ ಪದ್ದತಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ದೂರ ಮಾಡಲಾಗಿದೆ ಎಂದರು.
ತಹಸೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ಸಂವಿಧಾನ ರಚನೆಗಾಗಿ ಅಂಬೇಡ್ಕರ್ ಅವರು ಅವಿರಥವಾಗಿ ಶ್ರಮಿಸಿದ್ದಾರೆ. ಹಲವು ದೇಶಗಳ ಕಾನೂನುಗಳ ಬಗ್ಗೆ ಅಧ್ಯಯನ ಮಾಡಿ ಭಾರತಕ್ಕೆ ಉತ್ತಮ ಸಂವಿಧಾನ ರಚಿಸಿಕೊಟ್ಟಿದ್ದಾರೆ. ಭಾರತದ ಸಂವಿಧಾನ ಪ್ರಪಂಚದ ಶ್ರೇಷ್ಟ ಸಂವಿಧಾನ ಎಂತಲೂ ಕರೆಯುತ್ತಾರೆ. ದೇಶದ ಸಂವಿಧಾನ ರಚನೆ ಹಿಂದಿನ ದೊಡ್ಡ ಶಕ್ತಿ ಅಂಬೇಡ್ಕರ್. ಸಮಾಜದಲ್ಲಿ ದುರ್ಬಲರು, ಕಾರ್ಮಿಕರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಅವರು ಸುದೀರ್ಘ ಹೋರಾಟ ನಡೆಸಿದರು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಕ್ಷ್ಮೀಪತಿರೆಡ್ಡಿ, ಕೆ.ವಿ.ನಾರಾಯಣಸ್ವಾಮಿ, ಕೃಷ್ಣಪ್ಪ, ಮುನಿಕೃಷ್ಣ, ಬಾಲಾಜಿ ಇದ್ದರು.