ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಕರ್ನಾಟಕದಲ್ಲಿ ಮತ್ತೆ ಕೊರೊನಾ ವ್ಯಾಕ್ಸಿನೇಷನ್?: ದಿನೇಶ್ ಗುಂಡೂರಾವ್

1 min read

ರಾಜ್ಯದಲ್ಲಿ ಕೊರೊನಾ ಮತ್ತೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 78 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು ಒಂದರಲ್ಲೇ 68 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ಬಿಗಿ ಕ್ರಮಗಳ ಮೂಲಕ ಆರಂಭದಲ್ಲಿಯೇ ಕೊರೊನಾ ಕಟ್ಟಿಹಾಕಬೇಕಿದೆ.

ಗಡಿ ಜಿಲ್ಲೆ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಕರ್ನಾಟಕದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ರಾಜ್ಯದಲ್ಲಿ ಮತ್ತೆ ಕೊರೊನಾ ವ್ಯಾಕ್ಸಿನೇಷನ್‌ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಸ್ಥಿತಿಗತಿ ಪರಿಶೀಲಿಸಿ ಮಾತನಾಡಿದ ಅವರು, ತಜ್ಞರ ತಂಡ ಸೂಚಿಸಿದ್ದಲ್ಲಿ ಮಾತ್ರ ವ್ಯಾಕ್ಸಿನೇಷನ್‌ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಭಾಗವಾಗಿದ್ದರಿಂದ ಅಧಿಕಾರಿಗಳಿಗೆ ಎಚ್ಚರಿಕೆಯಿಂದ ಇರಲು ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ಯಾವುದೇ ಸಂದರ್ಭ ಎದುರಾದರೂ ಎದುರಿಸಲು ಸಿದ್ದರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕ್ಯಾಬಿನೆಟ್ ಉಪಸಮಿತಿ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದೆ. ಕೇಂದ್ರ ಹಾಗೂ ಬೇರೆ ರಾಜ್ಯಗಳ ಮಾಹಿತಿ ಪಡೆದು ನಿರ್ಧಾರ ಕೈಗೊಳ್ಳಲಿದ್ದೇವೆ. ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸುವ ನಿರ್ಧಾರ ಮಾಡಿಲ್ಲ. ಇಲ್ಲಿಯವರೆಗೆ ಎಲ್ಲವೂ ಸಹಜ ಸ್ಥಿತಿಯಲ್ಲಿ ‌ಇರಲಿದೆ. ಕ್ರಿಸ್ಮಸ್, ಹೊಸವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದರು.

ಕೋವಿಡ್ ರೂಪಾಂತರಿ ತಳಿ ಜೆಎನ್ 1 ಅಪಾಯಕಾರಿಯಲ್ಲ. ಯಾರಿಗೂ ಹೆಚ್ಚಿನ ಅಪಾಯವಿಲ್ಲ. ಈ ಬಗ್ಗೆ ಮೆಡಿಕಲ್ ತಾಂತ್ರಿಕ ಸಮಿತಿಗಳು ಈಗಾಗಲೇ ಹೇಳಿಕೆ ನೀಡಿದೆ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವು ಇರುವುದು ಒಳಿತು. ಸಂಪುಟ ಉಪಸಮಿತಿ ತಜ್ಞರ ವರದಿ ಪಡೆದು ನಿರ್ಧಾರ ಮಾಡಲಿದೆ. ರಾಜ್ಯದಲ್ಲಿ ಸದ್ಯ ಐದು ಸಾವಿರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 330 ಹಾಗೂ ಬೆಂಗಳೂರಿನಲ್ಲಿ 1,500 ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದೆ. ಗಡಿ ಜಿಲ್ಲೆಯಾಗಿದ್ದರಿಂದ ಮಂಗಳೂರು, ಮೈಸೂರಿಗೆ ಹೆಚ್ಚು ನೀಡಲಾಗಿದೆ ಎಂದು ಹೇಳಿದರು.

ವೆಂಟಿಲೇಟರ್ ಕಾರ್ಯನಿರ್ವಹಣೆ ಪರೀಕ್ಷೆ ಬಗ್ಗೆ ಕ್ರಮ ವಹಿಸುತ್ತೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್ ಪೂರೈಕೆ ಕೆಲಸ ಆಗುತ್ತಿದೆ. ಕೆಲವು ಕಡೆ ಸ್ವಲ್ಪ ತಡ ಆಗಿದೆ, ಎಲ್ಲವೂ ಶೀಘ್ರ ಆಗಲಿದೆ.‌ ಹೆಚ್ಚು ಟೆಸ್ಟಿಂಗ್ ಮಾಡುವ ಅಗತ್ಯ ಇದೆಯೇ ಎಂದು ನಿರ್ಧಾರ ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ಗೈಡ್ ಲೈನ್ಸ್ ಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ‌ ಎಂದು ತಿಳಿಸಿದರು.

ಕ್ರಿಸ್ಮಸ್, ಹೊಸ ವರ್ಷಕ್ಕೆ ಯಾವುದೇ ಹೊಸ ಗೈಡ್ ಲೈನ್ಸ್ ಇಲ್ಲ. ಆದರೆ ಜನ ಸೇರಿದ್ದಲ್ಲಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸಲಹೆ ಕೊಡುತ್ತೇವೆ. ಯಾವುದೂ ಕಡ್ಡಾಯವಲ್ಲ, ನಾವು ಯಾವುದೇ ನಿರ್ಬಂಧ ವಿಧಿಸಲ್ಲ.‌ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಈ ಉಪತಳಿ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು

About The Author

Leave a Reply

Your email address will not be published. Required fields are marked *