ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ; ಎಚ್‌ಡಿ ಕುಮಾರಸ್ವಾಮಿ ಆರೋಪ ಆಧಾರರಹಿತ: ಇಂಧನ ಸಚಿವ ಕೆಜೆ ಜಾರ್ಜ್
1 min read
1 year ago
ಸಿದ್ದರಾಮಯ್ಯ ಸರ್ಕಾರದ ಮೇಲೆ ಎಚ್‌ಡಿ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಇಂಧನ ಸಚಿವ ಕೆಜೆ ಜಾರ್ಜ್ ತಳ್ಳಿಹಾಕಿದ್ದಾರೆ. ರಾಜ್ಯದ ಇಂಧನ ಅಗತ್ಯಗಳನ್ನು ಪೂರೈಸಲು ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಮಾಡಿಕೊಳ್ಳುವಲ್ಲಿ ಅವ್ಯವಹಾರ ನಡೆದಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು.

ಕಲ್ಲಿದ್ದಲು ಆಮದು ಮತ್ತು ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಗಳು ಆಧಾರರಹಿತವಾಗಿದ್ದು, ಈ ಹೇಳಿಕೆಯನ್ನು ನಾವು ತಿರಸ್ಕರಿಸುತ್ತೇವೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
‘ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿದ್ಯುತ್ ಬಳಕೆ ಕಡಿಮೆಯಾಗಿದೆ. ಆದರೆ, ಈ ವರ್ಷ, ಬೇಡಿಕೆಯಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ. ವಿದ್ಯುತ್ ಬೇಡಿಕೆಯು ತುಂಬಾ ಹೆಚ್ಚಿದ್ದು, ಆಗಸ್ಟ್‌ನಲ್ಲಿನ ವಿದ್ಯುತ್ ಬಳಕೆ ಬೇಸಿಗೆಯ ತಿಂಗಳ ಬಳಕೆಯನ್ನು ಮೀರಿಸಿದೆ’ ಎಂದು ಹೇಳಿದರು.