ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣದಲ್ಲಿ ಮತ ಎಣಿಕೆ ಆರಂಭ, ಕಾಂಗ್ರೆಸ್ ಮುನ್ನಡೆ
1 min readನಾಲ್ಕು ರಾಜ್ಯಗಳ ಮತದಾನ ಎಣಿಕೆ ಕಾರ್ಯ ಆರಂಭಗೊಂಡಿದ್ದು ತೀವ್ರ ಪೈಪೋಟಿ ಏರ್ಪಟ್ಟಿದೆ.ಆದರೂ ಕಾಂಗ್ರೆಸ್ ಸದ್ಯ ಪ್ರಾರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಮಧ್ಯಪ್ರದೇಶದಲ್ಲಿ 49 ಸ್ಥಾನಗಳ ಮೊದಲ ಟ್ರೆಂಡ್ ನಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಛತ್ತೀಸ್‌ಗಢ ದಲ್ಲಿ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಪ್ರಸ್ತುತ, ಟ್ರೆಂಡ್‌ಗಳು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆಯನ್ನು ತೋರಿಸುತ್ತವೆ.
ರಾಜಸ್ಥಾನದಲ್ಲಿ 40 ಸ್ಥಾನಗಳ ಮೊದಲ ಟ್ರೆಂಡ್‌ನಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಕೂಡ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.