ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
1 min read
ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
ಅಂಬೇಡ್ಕರ್ ವಿರುದ್ಧ ಹೇಳಿಕೆಗೆ ತೀವ್ರ ಖಂಡನೆ
ಮ0ಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳು
ಕೇ0ದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ನೀಡಿರುವ ಹೇಳಿಕೆಗೆ ಮಂಚೇನಹಳ್ಳಿ ತಾಲೂಕಿನಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ದಲಿತ ಸಂಘಟನೆಗಳ ಒಕ್ಕೂಟದಿಂದ ಕೇಂದ್ರ ಗೃಹ ಸಚಿವರ ವಿರುದ್ಧ ಪ್ರತಿಭಟನೆ ನಡಎಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ಅವಹೇಳನ ಕಾರಿಯಾಗಿ ಮಾತನಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಗಳು ಒತ್ತಾಯಿಸಿ ಮಂಚೇನಹಳ್ಳಿ ಬಸ್ ನಿಲ್ದಾಣದಿಂದ ನಾಡಕಛೇರಿವರೆಗೂ ಮೆರವಣಿಗೆ ನಡೆಸಿ, ತಾಲೂಕು ದಂಡಾಧಿಕಾರಿ ದೀಪ್ತಿ ಅವರಿಗೆ ಮನವಿ ಸಲ್ಲಿಸಿದರು. ದಲಿತ ಮುಖಂಡ ನರಸಿಂಹಮೂರ್ತಿ ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿದ್ದು, ಇಡೀ ವಿಶ್ವ ಅವರನ್ನು ಒಪ್ಪಿಕೊಂಡಿದೆ. ಆದರೆ ಅಂಥವರ ವಿರುದ್ಧ ಕೇಂದ್ರ ಸಚಿವರು ಅವಮಾನಿಸಿದ್ದು ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆ ಒಕ್ಕೂಟದ ವಿ.ಎನ್. ಕೃಷ್ಣಮೂರ್ತಿ, ವಿಜಯ್, ಗಂಗಣ್ಣ, ಸುಬ್ರಮಣಿ, ತಿಮ್ಮರಾಜು, ಹನುಮಂತು ಇದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.