ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಸರಾ ಸಂಭ್ರಮ
1 min readಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಸರಾ ಸಂಭ್ರಮ
ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳೊ0ದಿಗೆ ಮೆರವಣಿಗೆ
ನಾಡಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಇಂದು ಆನೆಯ ಮೇಲೆ ಅಂಬಾರಿ ಮೂಲಕ ಅಮ್ಮನವರ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳೊ0ದಿಗೆ ಅದ್ದೂರಿ ದಸರಾ ಕಾರ್ಯಕ್ರಮವನ್ನು ನಡೆಸಲಾಯಿತು.
ನಾಡಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯಪುರ ಹೋಬಳಿ ಗಡ್ಡದ ನಾಯಕನಹಳ್ಳಿಯ ಶ್ರೀ ದುರ್ಗಾಪರಮೇಶ್ವರಿಯ ಪ್ರಧಾನ ಅರ್ಚಕರಾದ ನಾಗರಾಜಪ್ಪ ಸ್ವಾಮೀಜಿಗಳ ನೇತೃತ್ವದಲ್ಲಿ ದಸರಾ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಆನೆಯ ಮೇಲೆ ಅಂಬಾರಿ ಮೂಲಕ ಅಮ್ಮನವರ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳೊ0ದಿಗೆ ಅದ್ದೂರಿ ದಸರಾ ಕಾರ್ಯಕ್ರಮವನ್ನು ನಡೆಸಲಾಯಿತು.
ಜಾನಪದ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಹರಿಕಥೆ ಸಾಂಸ್ಕೃತಿಕ ಕಲಾತಂಡ ಹೋಮ ಹವನಗಳು ವಿಜೃಂಭಣೆಯಿ0ದ ದೇವಾಲಯದ ಆವರಣದಲ್ಲಿ ನಡೆಯಿತು. ಇನ್ನು ದೇವಾಯಲಕ್ಕೆ ಬಂದ ಭಕ್ತರಿಗೆ ವಸ್ತ್ರಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.
ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಬೆಳಗ್ಗೆ 4:30ಕ್ಕೆ, ಗೋಪೂಜೆ, ಹೋಮ ಕಳಸ ಪೂಜೆ ಅಮ್ಮನವರಿಗೆ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಸಲಾಯಿತು.
ನಾಳೆ ಲಲಿತಾ ಸಹಸ್ರನಾಮ ಪೂಜಾ ಕಾರ್ಯಕ್ರಮಗಳು ಪಲ್ಲಕ್ಕಿ ಉತ್ಸವ ಊರಿನ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು ಎಂದು ದೇವಾಲಯದ ಪ್ರಧಾನ ಅರ್ಚಕರಾದ ನಾಗರಾಜಪ್ಪ ಸ್ವಾಮೀಜಿಗಳು ಹೇಳಿದರು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.