ಬೆಂ-ಮೈಸೂರು ಹೆದ್ದಾರಿಯಲ್ಲಿ ಡೆಡ್ಲಿ ಅಪಘಾತ : ಕಂಟೈನರ್ ಗೆ `KSRTC’ ಬಸ್ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಮಂದಿಗೆ ಗಾಯ
1 min readಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಮಂಡ್ಯದ ಹೊರ ವಲಯದ ಸಾಂಜೋ ಆಸ್ಪತ್ರೆ ಬಳಿ ನಿಂತಿದ್ದ ಕಂಟೈನರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸೇರಿದಂತೆ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೈ- ಬೆಂ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಂದಾಜು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಐದಾರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಂಡ್ಯದ ಸಾಂಜೋ ಆಸ್ಪತ್ರೆ ಮುಂಭಾಗ ಸೋಮವಾರ ಜರುಗಿದೆ. ತುಮಕೂರಿನಿಂದ – ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ದಶಪಥ ಹೆದ್ದಾರಿಯಿಂದ ಮಂಡ್ಯ ನಗರಕ್ಕೆ ತೆರಳಲು ಸರ್ವಿಸ್ ರಸ್ತೆಗೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಕ್ಯಾಂಟರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದ್ದು, ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಾಗಿ ಗಾಯಗೊಂಡಿದ್ದಾರೆ.
ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯವಾಗಿದ್ದು, ಪಲ್ಟಿಯಾದ ಬಸ್ ನಲ್ಲಿದ್ದವರನ್ನು ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಹೊರ ತೆಗೆದು ಹತ್ತಿರವೇ ಇದ್ದ ಸಾಂಜೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣವೇ ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೋಲೀಸರು ಆಗಮಿಸಿ ಪಲ್ಟಿಯಾಗಿದ್ದ ಬಸ್ ಅನ್ನು ಕ್ರೇನ್ ಮೂಲಕ ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday