ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ
1 min readನಿನ್ನೆ ರಾತ್ರಿ ಬಸವೇಶ್ವರನಗರದ ಪದ್ಮರಾಜ್ ಎಂಬುವರು ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಮಾಜಿ ಸಚಿವ ಕೆ.ಗೋಪಾಲಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೂ ದೂರು ನೀಡಿದ್ದೇನೆ.
ಪದ್ಮರಾಜ್ ಎಂಬುವರು ಅತ್ಯಂತ ಕೆಟ್ಟ ಪದಗಳಿಂದ ನನ್ನನ್ನು ನಿಂದಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿಯೂ ಮಾತನಾಡಿದ್ದೇನೆ. ಈ ವಿಚಾರವನ್ನು ಸದನದಲ್ಲಿ ಚರ್ಚಿಸಲು ಅವಕಾಶ ಕೋರಿರುವುದಾಗಿ ಹೇಳಿದರು. ಪದ್ಮರಾಜ್ ಎಂಬುವರು ಮಾಜಿ ಪಾಲಿಕೆ ಸದಸ್ಯರಾಗಿದ್ದು, ತಮಗೆ ಹಳೆ ಪರಿಚಯ.
ಪ್ರಧಾನಿ ಮೋದಿ ಇಲ್ಲದಿದ್ದರೆ ನಾನು ನನ್ನ ಕುಟುಂಬ ಸೇರುತ್ತಿರಲಿಲ್ಲ ; ವರ್ಮಾ
ಹಲವು ಬಾರಿ ನನ್ನಿಂದ ಅನುಕೂಲ ಮಾಡಿಕೊಂಡಿದ್ದಾರೆ. ನನಗೆ ಮಾತ್ರವಲ್ಲ, ಹಲವರಿಗೆ ಇದೇ ರೀತಿ ಬೆದರಿಕೆ ಹಾಕಿದ್ದಾರೆ. ಈ ವಿಚಾರವನ್ನು ಸಂಬಂಧಪಟ್ಟ ಎಸಿಪಿ, ಡಿಸಿಪಿಯವರಿಗೂ ತಿಳಿಸಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರಿಗೂ ಮಾಹಿತಿ ನೀಡಿರುವುದಾಗಿ ಅವರು ಹೇಳಿದರು.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnews