ಪಂಚರಾಜ್ಯ ಚುನಾವಣೆಯಲ್ಲಿ ಸೋಲು; ಇಂಡಿಯಾ ಮೈತ್ರಿಕೂಟ ಸಭೆ ರದ್ದು
1 min read
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬುಧವಾರ (ಡಿಸೆಂಬರ್ 06) ನಡೆಯಬೇಕಿದ್ದ ಇಂಡಿಯಾ ಒಕಕೂಟದ ಸಭೆಯನ್ನು ಮುಂದೂಡಲಾಗಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ. ನಾಳೆ ನಡೆಯಬೇಕಿದ್ದ ಸಬೆಗೆ ವಿರೋಧ ಪಕ್ಷಗಳ ಪ್ರಮುಖರು ಗೈರಾಗುತ್ತಿರುವ ಬೆನ್ನಲ್ಲೇ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ನಾಳೆಯ ಸಭೆ ಮುಂದೂಡಿಕೆಯಾಗಿದ್ದರೂ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಈ ತಿಂಗಳ ಮೂರನೇ ವಾರದಲ್ಲಿ ಎಲ್ಲರಿಗೂ ಅನುಕೂಲಕರವಾದ ದಿನಾಂಕದಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮೂರು ರಾಜ್ಯಗಳ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಭೆಯನ್ನು ಕರೆದಿದ್ದರು.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿದಂತೆ ಪ್ರಮುಖ ನಾಯಕರು ನಾಳಿನ ಸಭೆಯಲ್ಲಿ ಭಾಗುಯಾಗುವುದಿಲ್ಲ ಎಂದು ತಿಳಿದು ಬಂದಿದೆ. ತಮ್ಮ ಬದಲಿಗೆ ತಮ್ಮ ಪಕ್ಷದ ಬೇರೆ ನಾಯಕರನ್ನು ಕಳುಹಿಸುವುದಾಗಿ ಹೇಳಲಾಗಿತ್ತಾದರೂ ಅಂತಿಮ ಕ್ಷಣದಲ್ಲಿ ಈ ಪ್ರಸ್ತಾವನೆಯನ್ನು ಹಿಂಪಡೆಯಲಾಗಿದೆ.