ವೃಂದ, ನೇಮಕ ನಿಯಮ 2017ಕ್ಕೆ ತಿದ್ದುಪಡಿಗೆ ಆಗ್ರಹ
1 min readವೃಂದ, ನೇಮಕ ನಿಯಮ 2017ಕ್ಕೆ ತಿದ್ದುಪಡಿಗೆ ಆಗ್ರಹ
12ಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಬೆಂಗಳೂರು ಚಲೋ
ರಾಜ್ಯಾದ್ಯಂತ ಶಿಕ್ಷಕರ ವರ್ಗಾವಣೆಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕ ನಿಯಮ 2017ಕ್ಕೆ ತಿದ್ದುಪಡಿ ಮಾಡಿ, ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿ0ದ ಆಗಸ್ಟ್ 12 ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ಹಮ್ಮಿಕೊಂಡ ಪ್ರತಿಭಟನೆಗೆ ಸಹಕರಿಸಲು ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮನವಿ ಮಾಡಿದರು.
ರಾಜ್ಯಾದ್ಯಂತ ಶಿಕ್ಷಕರ ವರ್ಗಾವಣೆಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕ ನಿಯಮ 2017ಕ್ಕೆ ತಿದ್ದುಪಡಿ ಮಾಡಿ, ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿ0ದ ಆಗಸ್ಟ್ 12 ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಬಾಧಿತ 1 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಿಕ್ಷಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 5 ರಂದು ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಶಿಕ್ಷಕರಿಗೆ ಆಗಿರುವ ಅನ್ಯಾಯ ಕುರಿತು ತಹಸೀಲ್ದಾರ್, ಬಿಇಒಗಳಿಗೆ ಮನವಿ ನೀಡಿ ಹೋರಾಟಕ್ಕೆ ಬೆಂಬಲ ಕೋರುವುದಾಗಿ ಶಿಕ್ಷಕರು ಹೇಳಿದ್ದಾರೆ.
ಆಗಸ್ಟ್ 7 ರಂದು ಬೇಡಿಕೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಡಿಡಿಪಿಐಗಳಿಗೆ ಮಾಹಿತಿ ನೀಡಲಿದ್ದಾರೆ. ಬಳಿಕ ಆ.12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವೆಂಕಟರವಣ ಹೇಳಿದರು.
ಕಾರ್ಯದರ್ಶಿ ಸಿ.ವೆಂಕಟರಾಯಪ್ಪ ಮಾತನಾಡಿ, ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಯ ಶಿಕ್ಷಕರ ಸ್ಥಿತಿ ಡೋಲಾಯಮಾನವಾಗಿದೆ. ರಾಜ್ಯದಲ್ಲಿ ಸುಮಾರು 80 ಸಾವಿರ ಪಿಎಸ್ ಟಿ ಶಿಕ್ಷಕರು ಬಿಎ, ಬಿಎಸ್ಸಿ, ಬಿಎಡ್, ಎಂ.ಎ, ಎಂ.ಎಸ್ಸಿ, ಎಂ.ಎಡ್, ಎಂ.ಫಿಲ್, ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಆದರೂ ಇವರಿಗೆ ಬಡ್ತಿ ನೀಡುವ ಬದಲು ಹಿಂಬಡ್ತಿ ನೀಡಲಾಗಿದೆ. ಹೀಗಾಗಿ ಆಗಸ್ಟ್ 12 ರಿಂದ ರಾಜ್ಯದ ಶಿಕ್ಷಕರು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಹೋರಾಟ ಆರಂಭ ಮಾಡಲಿದ್ದಾರೆ ಎಂದರು.
ಬೆ0ಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಯಲಿದ್ದು ಶಕ್ತಿ ಪ್ರದರ್ಶನದ ಮೂಲಕ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕರು ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬೀದಿಗಿಳಿಯಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಶಿಕ್ಷಕರು ಈ ಹೋರಾಟದಲ್ಲಿ ಪಾಲ್ಗೊಂಡು ರಾಜ್ಯದ ಮಟ್ಟದ ಬೃಹತ್ ಪ್ರತಿಭಟನೆ ಮಾಡುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಬಿಇಒ ವೆಂಕಟೇಶಪ್ಪ, ಶಿಕ್ಷಣ ಸಂಯೋಜಕ ಈಶ್ವರಪ್ಪ, ಶ್ರೀನಿವಾಸ್, ರಂಗಾರೆಡ್ಡಿ, ಅಂಜನಪ್ಪ, ಪ್ರಭಾವತಿ, ಧರ್ಮಪುತ್ರಿ, ನಾರಾಯಣ ಸ್ವಾಮಿ ಇದ್ದರು.