ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ
1 min readಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ
ಪ್ರಬುದ್ಧ ಕರ್ನಾಟಕ ಭೀಮ ಸೇನೆಯಿಂದ ಮನವಿ
ಅಕ್ರಮವಾಗಿ ಮಂಜೂರು ಮಾಡಿಕೊಂಡಿರುವ ಜಮೀನು ವಜಾಗೊಳಿಸಬೇಕೆಂದು ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮಸೆನೆಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ಅರೇಹಳ್ಳಿ ಗುಡ್ಡದಹಳ್ಳಿ ಗ್ರಾಮದ ಸರ್ವೆ ನಂ.57ರಲ್ಲಿ 10 ಎಕರೆ 25 ಗುಂಟೆ ಜಮೀನಿನ ಪೈಕಿ 6 ಎಕರೆ ಜಮೀನಿಗೆ ಸಂಬ0ಧಿಸಿದ0ತೆ ಕಾನೂನು ಬಾಹಿರವಾಗಿ ಮಂಜೂರು ಮಾಡಿಕೊಂಡಿರುವ ಜಮೀನನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಹಾಗೂ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಕುರಿತು ದಲಿತ ಮುಖಂಡ ಯು. ಮುನಿರಾಜು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ಅರೇಹಳ್ಳಿ ಗುಡ್ಡದಹಳ್ಳಿ ಗ್ರಾಮದ ಸರ್ವೆ ನಂರ್ಬ 57 ರಲ್ಲಿ 10 ಎಕರೆ 25 ಗುಂಟೆ ಜಮೀನಿಗೆ ಸಂಬ0ಧಿಸಿ ೬ ಎಕರೆ ಜಮೀನಿನಲ್ಲಿ ತಲಾ 1 ಎಕರೆ 20 ಗುಂಟೆಯ0ತೆ 4 ಜನಕ್ಕೆ ಕಾನೂನು ಬಾಹಿರವಾಗಿ ದಾಖಲಾತಿಗಳನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ, ಕಾನೂನು ಬಾಹಿರವಾಗಿ ಮಂಜೂರು ಮಾಡಿರುವ ಭೂಮಿಯನ್ನು ವಜಾ ಗೊಳಿಸುವ ಮುಖಾಂತರ ಸದರಿ ಜಾಗವನ್ನು ಸರ್ಕಾರವು ವಶಪಡಿಸಿಕೊಳ್ಳಬೇಕೆಂದು ಒತ್ತಾಯಿಸಿದರು. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪಕ್ಷದಲ್ಲಿ ಮುಂದೆ ಸಂಘಟನೆಯಿ0ದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.