ರೈತ ಆತ್ಮಹತ್ಯೆ ಪರಿಹಾರ ಶೀಘ್ರ ವಿತರಣೆಗೆ ಆಗ್ರಹ
1 min readರೈತ ಆತ್ಮಹತ್ಯೆ ಪರಿಹಾರ ಶೀಘ್ರ ವಿತರಣೆಗೆ ಆಗ್ರಹ
ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸರ್ಕಾರಕ್ಕೆ ಒತ್ತಾಯ
ಬೀದರ್ ದಕ್ಷಿಣ ಕ್ಷೇತ್ರದ ಉಡಬಾಳ ಹಾಗೂ ಪೋಲಕಪಳ್ಳಿ ರೈತರ ಆತ್ಮಹತ್ಯೆ ಪರಿಹಾರ ಈವರೆಗೂ ಬಿಡುಗಡೆ ಮಾಡಿಲ್ಲ. ಹೀಗಾದರೆ ರೈತ ಪರಿವಾರದ ಜೀವನ ಹೇಗೆ ಎಂದು ಪ್ರಶ್ನಿಸಿರುವ ಶಾಸಕ ಶೈಲೇಂದ್ರ ರೈತ ಕುಟುಂಬದ ಪರಿಸ್ಥಿತಿ ಅರಿತು ಕೂಡಲೇ ಮೃತಪಟ್ಟ ರೈತರ ಪರಿವಾರಕ್ಕೆ ಶೀಘ್ರ ಹಣ ಬಿಡುಗಡೆ ಮಾಡಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದರು.
ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ದಕ್ಷಿಣ ಕ್ಷೇತ್ರದ ಉಡಬಾಳ ಹಾಗೂ ಪೋಲಕಪಳ್ಳಿ ರೈತರ ಆತ್ಮಹತ್ಯೆ ಪರಿಹಾರ ಈವರೆಗೂ ಬಿಡುಗಡೆ ಮಾಡಿಲ್ಲ. ಹೀಗಾದರೆ ರೈತ ಪರಿವಾರದ ಜೀವನ ಹೇಗೆ ಎಂದು ಪ್ರಶ್ನಿಸಿರುವ ಶಾಸಕ ಶೈಲೇಂದ್ರ ರೈತ ಕುಟುಂಬದ ಪರಿಸ್ಥಿತಿ ಅರಿತು ಕೂಡಲೇ ಮೃತಪಟ್ಟ ರೈತರ ಪರಿವಾರಕ್ಕೆ ಶೀಘ್ರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಬೀದರ್ ದಕ್ಷಿಣ ಮತಕ್ಷೇತ್ರದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಅತ್ಯಂತ ಅವಶ್ಯಕತೆ ಇರುವ ಹನಿನೀರಾವರಿ ಯೋಜನೆಗೆ ಅನುದಾನದ ಕೊರತೆಯಿಂದ ರೈತರು ವರ್ಷಗಟ್ಟಲೆ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ರೈತ ಸಂಪರ್ಕ ಕೇಂದ್ರಕ್ಕೆ ಅಲೆದಾಡಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಷಯ ಗಂಭೀರವಾಗಿ ಪರಿಗಣಿಸಬೇಕು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ರೈತರ ಜಮೀನಿನಲ್ಲಿ ಕಾಡು ಹಂದಿ ಮತ್ತು ಜಿಂಕೆಗಳ ಹಾವಳಿ ಹೆಚ್ಚಾಗಿ ರೈತರು ಬೆಳೆದ ಬೆಳೆ ಕೈಗೆ ಸಿಗದಂತಾಗಿದೆ ಈ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಅರಣ್ಯ ಇಲಾಖೆಯಿಂದ ರೈತರಿಗೆ ಜಮೀನಿಗೆ ಬೇಲಿ ಹಾಕಿಕೊಳ್ಳಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಮತ್ತು ಕಾಡು ಪ್ರಾಣಿಗಳಿಂದ ಹಾನಿಯಾದ ಬೆಳೆಗೆ ವರದಿಯಾದ ಶೀಘ್ರ ಪರಿಹಾರ ನೀಡಬೇಕು ಎಂದು ಸಭೆಯಲ್ಲಿ ತಿಳಿಸಿದರು.
ಕ್ಷೇತ್ರದ ಮನ್ನಾಏಖೇಳ್ಳಿ ಆಸ್ಪತ್ರೆಯಲ್ಲಿ ಸುತ್ತ ಮುತ್ತಲಿನ ೫೦ಕ್ಕೂ ಹೆಚ್ಚು ಗ್ರಾಮಗಳ ಜನರು ಚಿಕಿತ್ಸೆ ಪಡೆಯುತ್ತಾರೆ. ಅಂತಹ ದೊಡ್ಡ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸಕ ವೈದ್ಯರ ಹುದ್ದೆ ಖಾಲಿ ಇದೆ. ಶೀಘ್ರ ಭರ್ತಿ ಮಾಡಬೇಕು ಮತ್ತು ಎಲ್ಲ ಆಸ್ಪತ್ರೆಗಳಲ್ಲಿ ಡಿ ಗ್ರೂಪ್ ಹುದ್ದೆ ಭರ್ತಿ ಮಾಡಬೇಕು. ೧೦೮ ಅಂಬುಲೆನ್ಸ್ ಸೇವೆಗೆ ಇಬ್ಬರು ಚಾಲಕರನ್ನು ನಿಯೋಜಿಸಬೇಕು. ಬರೂರ ಗ್ರಾಮಕ್ಕೆ ಆಸ್ಪತ್ರೆ ಮಂಜೂರಾಗಿದೆ ಆದರೆ ಸ್ಥಳದ ಕೊರತೆ ಇರುವ ಕಾರಣ ಯಾವುದೇ ರೀತಿಯ ಪ್ರತಿಕ್ರಿಯೆ ನಡೆದಿಲ್ಲ. ಹೀಗಾಗಿ ಶೀಘ್ರ ಈ ಕುರಿತು ಗಮನ ಹರಿಸಿ ಆಸ್ಪತ್ರೆ ಕಟ್ಟಡಕ್ಕೆ ಸ್ಥಳ ನೀಡಬೇಕು ಎಂದರು.