ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

ಸೂರಹಳ್ಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

1 min read

ಸೂರಹಳ್ಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

ನಂಜನಗೂಡು ತಾಲೂಕಿನ ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ನಂಜನಗೂಡಿನಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ಕೆಎಸ್‌ಆರ್ಟಿಸಿ ಘಟಕದ ಮುಂಭಾಗದಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ಸುಗಳು ಬರುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗಿದ್ದು, ವಿದ್ಯಾರ್ಥಿಗಳು ಐದು ಕಿಲೋಮೀಟರ್ ದೂರದವರೆಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಸೂರಹಳ್ಳಿಗೆ ಬಸ್ ವ್ಯವಸ್ಥೆ ಮಾಡಲು ನಂಜನಗೂಡಿನಿ0ದ ಮುದ್ದಹಳ್ಳಿ, ನವಿಲೂರು, ಮಾರ್ಗವಾಗಿ ಕಸುವಿನ ಹಳ್ಳಿಗೆ ಹೋಗುವ ಬಸ್‌ಗಳನ್ನು ಸೂರಹಳ್ಳಿ ಗ್ರಾಮಕ್ಕೂ ಬಿಡಬೇಕು ಎಂದು ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಡಿಪೋ ಮ್ಯಾನೇಜರ್‌ಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಕೂಡಲೇ ಸೂರಹಳ್ಳಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ರೈತರು ಪಟ್ಟು ಹಿಡಿದರು.
ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಕಾರ್ಯದರ್ಶಿ ಉಪ್ಪಿನ ಹಳ್ಳಿ ದೇವರಾಜ್, ಮಹಿಳಾ ಘಟಕದ ಅಧ್ಯಕ್ಷ ಶ್ವೇತಾ, ಮಲ್ಲೆಶ್ ಶೆಟ್ಟಿ, ಮಹದೇವಸ್ವಾಮಿ ಇದ್ದರು.

About The Author

Leave a Reply

Your email address will not be published. Required fields are marked *