ನಾಯನಹಳ್ಳಿಯಲ್ಲಿ ಡೆಂಘೀ ಜಾಗೃತಿ ಜಾಥಾ
1 min readನಾಯನಹಳ್ಳಿಯಲ್ಲಿ ಡೆಂಘೀ ಜಾಗೃತಿ ಜಾಥಾ
ಆರೋಗ್ಯ, ಶಿಕ್ಷಣ ಇಲಾಖೆ ಜಂಟಿಯಾಗಿ ಅರಿವು
ಸರ್ಕಾರಿ ಶಾಲಾ ಮಕ್ಕಳಿಂದ ಗ್ರಾಮದಲ್ಲಿ ಜಾಥಾ
ಡೆಂಘೀ ಜ್ವರ ರಾಜ್ಯಾದ್ಯಂತ ಆತಂಕ ಮೂಡಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಈ ಜ್ವರದ ಪ್ರಭಾವ ತೀವ್ರವಾಗಿಯೇ ಇದೆ ಹಾಗಾಗಿ ಡೆಂಘೀ ಜ್ವರದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ತಾಲೂಕಿನ ನಾಯನಹಳ್ಳಿಯಲ್ಲಿ ಆಯೋಜಿಸಲಾಗಿತ್ತು.
ಡೆಂಘೀ ಜ್ವರ ರಾಜ್ಯಾದ್ಯಂತ ಆತಂಕ ಮೂಡಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಈ ಜ್ವರದ ಪ್ರಭಾವ ತೀವ್ರವಾಗಿಯೇ ಇದೆ ಹಾಗಾಗಿ ಡೆಂಘೀ ಜ್ವರದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ತಾಲೂಕಿನ ನಾಯನಹಳ್ಳಿಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಜಂಟಿಯಾಗಿ ನಾಯನಹಳ್ಳಿ ಸರ್ಕಾರಿ ಶಾಲೆ ಮಕ್ಕಳೊಂದಿಗೆ ಗ್ರಾಮದಲ್ಲಿ ಅರಿವು ಮಾಡಿಸುವ ಜಾಥಾ ನಡೆಸಲಾಯಿತು.
ಡೆಂಘೀ ವೈರಸ್ ನಿಂದ ಬರುವ ಕಾಯಿಲೆ ಇದಾಗಿದ್ದು, ಸೋಂಕು ಹೊಂದಿದ ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಮನೆಗಳಲ್ಲಿ ಶೇಖರಿಸಿರುವ ನೀರಿನ ತಾಣಗಳಾದ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ, ಮಡಿಕೆ ಹಾಗೂ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು, ಒಡೆದ ಬಾಟಲಿ ಹಾಗೂ ರ್ಟೈ ಗಳಲ್ಲಿ ಶೇಖರವಾಗುವ ಶುದ್ದ ನೀರಿನಲ್ಲಿ ಸಾಮಾನ್ಯವಾಗಿ ಸಂತಾನಾಭಿವೃದ್ದಿ ಮಾಡುತ್ತವೆ ಹಗಲು ಹೊತ್ತಿನಲ್ಲಿ ಮಾತ್ರ ಮನುಷ್ಯರನ್ನು ಕಚ್ಚುತ್ತವೆ. ಸೊಳ್ಳೆಗಳ ನಿಯಂತ್ರಣದ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ ಎಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥ ನಡೆಸಿದ ಶಾಲಾ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದ್ದಾರೆ.
ಸೊಳ್ಳೆಗಳ ನಿಯಂತ್ರಣವೇ ಡೆಂಘೀ ಜ್ವರದ ಹತೋಟಿಗೆ ಮುಖ್ಯ ವಿಧಾನ. ಈ ಸೊಳ್ಳೆಗಳು ಮನೆಗಳಲ್ಲಿ ನೀರನ್ನು ಶೇಖರಿಸಿರುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಮ್ ಗಳು, ಬ್ಯಾರಲ್, ಮಣ್ಣಿನ ಮಡಿಕೆ, ರ್ಟೈ ಗಳು ಮುಂತಾದ ಕಡೆ ಶೇಖರಣೆಯಾಗುವ ನೀರಿನಲ್ಲಿ ಸಂತಾನ ಉತ್ಪತ್ತಿ ಮಾಡುತ್ತವೆ. ಹಾಗಾಗಿ ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ ಗಳು, ಏಕೂರ್ಲ ಇತ್ಯಾದಿಗಳನ್ನು ವಾರಕ್ಕೊಮ್ಮೆ ತಪ್ಪದೇ ಖಾಲಿ ಮಾಡಿ, ಒಣಗಿಸಿ ಪುನಃ ನೀರು ಭರ್ತಿ ಮಾಡಿಕೊಳ್ಳುವುದು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ತೊಟ್ಟಿ ಮುಂತಾದವುಗಳಿಗೆ ಸೊಳ್ಳೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚುವುದು. ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟೈರು. ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದತೆ ಎಚ್ಚರವಹಿಸುವುದು ಅಗತ್ಯ ಎಂದು ಮಕ್ಕಳು ಅರಿವು ಮೂಡಿಸಿದ್ದಾರೆ.