ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಉಪ ಲೋಕಾಯುಕ್ತರ ಭೇಟಿ
1 min readದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಉಪ ಲೋಕಾಯುಕ್ತರ ಭೇಟಿಉಪ ಲೋಕಾಯುಕ್ತ ಬಿ.ವೀರಪ್ಪನವರಿಂದ ಆಸ್ಪತ್ರೆ ಪರಿಶೀಲನೆ
ದೇವನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಇಂದು ಉಪ ಲೋಕಾಯುಕ್ತರಾದ ಬಿ. ವೀರಪ್ಪ ಭೇಟಿ ನಡೀಇ, ಪರಿಶೀಲನೆ ನಡೆಸಿದರು. ಅಲ್ಲದೆ ತಾಲೂಕು ಕಚೇರಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ, ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಕಂಡು ಲೋಕಾಯುಕ್ತ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ಹೊರಹಾಕಿದರು.
ದೇವನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಇಂದು ಉಪ ಲೋಕಾಯುಕ್ತರಾದ ಬಿ. ವೀರಪ್ಪ ಭೇಟಿ ನಡೀ ಇಂದು ಪರಿಶೀಲನೆ ನಡೆಸಿದರು. ಅಲ್ಲದೆ ತಾಲೂಕು ಕಚೇರಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ, ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಕಂಡು ಲೋಕಾಯುಕ್ತ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ಹೊರಹಾಕಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆ ಹಾಗೂ ವೈದ್ಯರ ಕೊರತೆ ಇರುವುದನ್ನು ಕಂಡು ಲೋಕಾಯುಕ್ತ ನ್ಯಾಯಾಧೀಶರಾದ ಬಿ.ವೀರಪ್ಪ ಗರಂ ಆದರು.
ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ 12 ಮಂದಿ ವೈದ್ಯರು ಕರ್ತವ್ಯ ನಿರ್ವಹಿಸಬೇಕಿದ್ದು, ಪ್ರಸ್ತುತ ಕೇವಲ ಒಬ್ಬೇ ಒಬ್ಬ ವೈದ್ಯರಿದ್ದರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಉಪಲೋಕಾಯುಕ್ತರಿಗೆ ಸಾರ್ವಜನಿಕರಿಂದ ದೂರುಗಳ ಸುರಿಮಳೆಯೇ ವ್ಯಕ್ತವಾಯಿತು. ಆಸ್ಪತ್ರೆಯಲ್ಲಿಯೇ ಸಿಗುವ ಕೆಲ ಔಷದಿಗಳನ್ನು ಹೊರಗಡೆಯಿಂದ ತರಲು ಹೇಳುತ್ತಾರೆ ಎಂದು ಜನರು ದೂರಿದರು.
ಇನ್ನು ದಂತ ವೈದ್ಯ ಆಸ್ಪತ್ರೆಯಲ್ಲಿ ಇರೋದೇ ಇಲ್ಲ, ಅವರು ವೈಯಕ್ತಿವಾಗಿ ಕ್ಲಿನಿಕ್ ನಡೆಸುತ್ತಿದ್ದು, ಸಾರ್ವಜನಿಕ ಆಸ್ಪತ್ರೆಗೆ ಬಾರದೆ ಸ್ವಂತ ಕ್ಲಿನಿಕ್‌ನಲ್ಲಿಯೇ ಇರ್ತಾರೆ ಎಂದು ಸಾರ್ವಜನಿಕರು ಆರೋಪಿಸಿದರು. ಯಾವುದೇ ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಬಂದರೆ ಇಲ್ಲಿನ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಚಿಕಿತ್ಸೆ ನೀಡಲು ಹಣ ಕೇಳುತ್ತಾರೆ ಎಂದು ಸಾರ್ವಜನಿಕರು ದೂರು ನೀಡಿದರು.
ಆಸ್ಪತ್ರೆಯಲ್ಲಿರುವ ಪರಿಸ್ಥಿತಿಗಳನ್ನು ಖುದ್ದು ಪರಿಶೀಲಿಸುವ ಜೊತೆಗೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಲಿಸಿದ ಉಪ ಲೋಕಾಯುಕ್ತರು ಆಸ್ಪತ್ರೆ ವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಆಸ್ಪತ್ರೆ ಪರಿಶೀಲನೆ ನಂತರ ತಾಲೂಕು ಕಚೇರಿಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.