ಬಿಜೆಪಿ ತೆಕ್ಕೆಗೆ ದೇವನೂರು ಗ್ರಾಪಂ ಅಧ್ಯಕ್ಷ ಸ್ಥಾನ
1 min readಬಿಜೆಪಿ ತೆಕ್ಕೆಗೆ ದೇವನೂರು ಗ್ರಾಪಂ ಅಧ್ಯಕ್ಷ ಸ್ಥಾನ
ದೇವನೂರು ಗ್ರಾಪಂ ನೂತನ ಅಧ್ಯಕ್ಷರಗಿ ಅವಿನಾಶ್ ಆಯ್ಕೆ
ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೇವನೂರು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅವಿನಾಶ್ ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಬಾರಿಯೂ ದೇವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ ಬಂದಿದೆ.
ನ0ಜನಗೂಡು ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಯಿತು. ಹಿಂದಿನ ಅಧ್ಯಕ್ಷ ಮಂಜು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ದೇವನೂರು ಗ್ರಾಮದ ಅವಿನಾಶ್ ಒಬ್ಬರೆ ನಾಮ ಪತ್ರ ಸಲ್ಲಿಸಿದ್ದರು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಮಂಜುಳಾ ಅವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಭ ಆಯ್ಕೆ ಪ್ರಕಟಿಸಿ ನೂತನ ಅಧ್ಯಕ್ಷರಾಗಿ ಅವಿನಾಶ್ ರವರು ಅವಿರೋಭವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
೧೯ ಸದಸ್ಯರ ಬಲ ಹೊಂದಿರುವ ದೇವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ೧೪ ಸದಸ್ಯರು ಹಾಜರಿದ್ದು, ೫ ಸದಸ್ಯರು ಗೈರಾಗಿದ್ದರು. ನೂತನ ಅಧ್ಯಕ್ಷ್ಷ ಅವಿನಾಶ್ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ. ಸಮಗ್ರ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಪಣ ತೊಟ್ಟು, ಶುದ್ಧ ಕುಡಿಯುವ ನೀರು, ರಸ್ತೆ ಶೌಚಾಲಯ ಸೇರಿದಂತೆ ನೈರ್ಮಲ್ಯಕ್ಕೆ ಹೆಚ್ಚು ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಶಶಿಕಲಾ ನಾಗೇಂದ್ರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಮೂರ್ತಿ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ, ಸಿಎಂ ಮಹದೇವಯ್ಯ, ಮಂಜು, ಚನ್ನಬಸಪ್ಪ ಇದ್ದರು.