ಪಾಕಿಸ್ತಾನಕ್ಕೆ ಬೆಂಬಲ ನೀಡಲು ಹೋಗಿದ್ದರಾ…?”
1 min readಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ವೀಕ್ಷಿಸಲು ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್…
ಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ವೀಕ್ಷಿಸಲು ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ, “ಅವರು ಪಾಕಿಸ್ತಾನಕ್ಕೆ ಬೆಂಬಲ ನೀಡಲು ಹೋಗಿದ್ದರಾ…?” ಎಂದು ಶನಿವಾರ ಪ್ರಶ್ನಿಸಿದ್ದಾರೆ.
“ನಿನ್ನೆ ಸಿಎಂ, ಡಿಸಿಎಂ ಹಾಗೂ ಕೆಲವು ಸಚಿವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಹೋಗಿದ್ದರು. ಭಾರತ-ಪಾಕಿಸ್ತಾನ ಪಂದ್ಯವಾದರೆ ಪರವಾಗಿಲ್ಲ. ಆದರೆ ಪಂದ್ಯ ನಡೆದಿದ್ದು ಪಾಕಿಸ್ತಾನ-ಆಸ್ಟ್ರೇಲಿಯಾ ನಡುವೆ. ಅವರು ಪಾಕಿಸ್ತಾನಕ್ಕೆ ಅಥವಾ ಆಸ್ಟ್ರೇಲಿಯಾಕ್ಕೆ ಬೆಂಬಲ ನೀಡಲು ಹೋಗಿದ್ದರಾ? ರಾಜ್ಯ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದೆ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.