ಉಚಿತ ಜಾನುವಾರು ಮೇವು ವಿತರಣೆ
1 min readಉಚಿತ ಜಾನುವಾರು ಮೇವು ವಿತರಣೆ
ರೈತರ ಅನುಕೂಲಕ್ಕೆ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಸಿದ್ದ
ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಭಾಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿರುವ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು ಉದ್ಘಾಟಿಸಿದರು. ದನಗಳ ಜಾತ್ರೆಗೆ ಸರ್ಕಾರದಿಂದ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಿದ್ದಾರೆ.
ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಭಾಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿರುವ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು ಉದ್ಘಾಟಿಸಿದರು. ಸ್ಥಳೀಯ ಸಂಘಟನೆ ಉಚಿತ ಜಾನುವಾರು ಮೇವು ನೀಡುತ್ತಿರುವುದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ರೈತರು ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.
ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ಮಾತನಾಡಿ, ಇಂದು ಉದ್ಘಾಟನೆಯಾಗಿರುವ ಮೇವು ಮತ್ತು ನೀರು ವಿತರಣಾ ಕಾರ್ಯಕ್ರಮ ಇನ್ನೂ ಮೂರು ನಾಲ್ಕು ದಿನ ಮುಂದುವರಿಯುತ್ತದೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ರೈತರಿಗೆ ಆದ್ಯತೆ ಎಂದರು. ಇತ್ತೀಚಿಗೆ ನಿಧನರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣನವರಿಗೆ ಪುಷ್ಪಾರ್ಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವೇದಿಕೆ ಸಹಯೋಗದೊಂದಿಗೆ ನಂದಿ ವಿ ಕೇರ್ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.