ರೈತರಿಗೆ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಣೆ
1 min readರೈತರಿಗೆ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಣೆ
ಕೃಷಿ ಇಲಾಖೆ ಸಹಾಯಕಿ ಕೃಷಿ ನಿರ್ದೇಶಕಿ ಜಿ.ಲಕ್ಷಿ
ರಾಷ್ಟಿಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಲಕ್ಷಿ ತಿಳಿಸಿದ್ದಾರೆ.
ರಾಷ್ಟಿಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಲಕ್ಷಿ ತಿಳಿಸಿದ್ದಾರೆ. ಬಾಗೇಪಲ್ಲಿ ಕೃಷಿ ಇಲಾಖೆಯಲ್ಲಿ 25 ಅರ್ಹ ರೈತ ಫಲಾನುಭವಿಗಳಿಗೆ ಶೇಂಗಾ, ರಾಗಿ, ತೊಗರಿ, ಮುಸಿಕಿನ ಜೋಳದ ಬಿತ್ತನೆ ಬೀಜ ವಿತರಣೆ ಮಾಡಿದರು.
ಕೃಷಿ ಇಲಾಖೆ ನಿರ್ದೇಶಕಿ ಜಿ.ಲಕ್ಷಿ ಮಾತನಾಡಿ, ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಇಳುವರಿ ಬರಲು ರೈತರಿಗೆ ಪ್ರಾತ್ಯಕ್ಷತೆ ಮೂಲಕ ಬಿತ್ತನೆ ಬೀಜ ನೀಡುತ್ತಿದ್ದೇವೆ. ರೈತ ಸಂಘದ ಮುಖಂಡರು ಜಂಟಿ ನಿರ್ದೇಶಕರಿಗೆ ರೈತರಿಗೆ ರಿಯಾಯಿತಿ ದರದಲ್ಲಿ ವಿತರಣೆ ಮಾಡಬೇಕು ಎಂದು ಮನವಿ ಮಾಡಿದ್ದರು, ಈ ಹಿನ್ನಲೆಯಲ್ಲಿ ಬಿತ್ತನೆ ಬೀಜ ನೀಡುತ್ತಿದ್ದು, 2,400 ರೂಪಾಯಿ ಮೌಲ್ಯದ ನೆಲಗಡಲೆ ಚೀಲವನ್ನು ರೈತರಿಗೆ ಕೇವಲ 1050 ರೂಪಾಯಿಗೆ ನೀಡಲಾಗಿದೆ. ಎಂದು ತಿಳಿಸಿದರು.
ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ತಾಲೂಕು ಅಧ್ಯಕ್ಷ ಹೆಚ್.ಎನ್.ಗೋವಿಂದರೆಡ್ಡಿ ಮಾತನಾಡಿ, ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿರುವ ಬಿತ್ತನೆ ಬೀಜ ರೈತರು ದುರುಪಯೋಗ ಮಾಡಿಕೊಳ್ಳಬಾರದು. ರೈತ ಸಂಘದಿoದ ರೈತರ ಹಿತದೃಷಿಯಿಂದ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ, ಅವರಿಗೆ ರಿಯಾಯಿತಿ ದರದಲ್ಲಿ ಶೇಂಗಾ ಮತ್ತು ಇನ್ನಿತರೆ ಬಿತ್ತನೆ ಬೀಜ ವಿತರಣೆ ಮಾಡಬೇಕು ಎಂದು ತಿಳಿಸಿದರು.