ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ಚಾಲನೆ

1 min read

ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ಚಾಲನೆ
ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರಿಂದ ಚಾಲನೆ

ಪ್ರತಿಯೊಬ್ಬ ಮನುಷ್ಯನಲ್ಲಿಯೂ ಸ್ಪರ್ಧಾತ್ಮಕ ಮನೋಭಾವದ ಜೊತೆಗೆ ಪ್ರತಿಭೆಯೂ ಅಡಗಿದ್ದು, ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡುವುದು ಮುಖ್ಯ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಅನಾದಿ ಕಾಲದಿಂದಲೂ ಜನರು ಹಲವಾರು ಕ್ರೀಡಾಕೂಟಗಳನ್ನು ಏರ್ಪಡಿಸಿಕೊಂಡು ಮನರಂಜನೆಗಾಗಿ ಹಾಗೂ ದೈಹಿಕ ಸಾಮರ್ಥ್ಯವನ್ನು ಮೈಗೂಢಿಸಿಕೊಳ್ಳುವುದಕ್ಕೆ ಕ್ರೀಡೆ ಎಂಬುವುದು ಬಹಳ ಮುಖ್ಯವಾಗಿ ತಿಳಿಸಿದ್ದಾರೆ ಎಂದರು. ಈ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ, ರಾಷ್ಟ ಮಟ್ಟದಲ್ಲಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸ್ಪಧೆೆðಗಳಲ್ಲಿ ಭಾಗವಹಿಸುವ ಮೂಲಕ ದೇಶದ ಘನತೆ, ಗೌರವ ಕ್ರೀಡಾಪಟುಗಳಿಂದ ಸಲ್ಲುತ್ತವೆ. ಭಾರತ ಜನ ಸಂಖ್ಯೆ 2ನೇ ಸ್ಥಾನದಲ್ಲಿ ಇದ್ದರು ಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಗಣನೀಯ ಸಾಧನೆ ಮಾಡುವ ಉದ್ದೇಶದಿಂದ ಪ್ರತಿ ವರ್ಷ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ ಎಂದರು.

ಮನುಷ್ಯ ದೈಹಿಕ ಸದೃಢವಾಗಿದ್ದರೆ ಮಾನಸಿಕವಾಗಿ ಉತ್ತಮವಾಗಿರುತ್ತಾನೆ. ಆದುದ್ದರಿಂದ ಮಕ್ಕಳಲ್ಲಿ ದೈಹಿಕ ಸಾಮರ್ಥ್ಯದ ಪ್ರತಿಭೆ ಗುರುತಿಸಿ ಅದಕ್ಕೆ ಹೆಚ್ಚು ಒತ್ತನ್ನು ನೀಡಲು ಶಿಕ್ಷಕರು ಪ್ರೋತ್ಸಾಹಿಸುವ ಮೂಲಕ ಪ್ರತಿಭೆಯುಳ್ಳ ಮಕ್ಕಳು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗುತ್ತಾರೆ. ಶಾಲೆಗಳಲ್ಲಿ ಇರುವ ಕ್ರೀಡಾ ಉಪಕರಣಗಳನ್ನು ಮಕ್ಕಳಿಗೆ ಒದಗಿಸಿ ಉತ್ತೇಜಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿಬೆಗಳನ್ನು ಗುರುತಿಸಿ ಕ್ರೀಡಾಕೂಟಗಳಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಅನುದಾನವನ್ನು ನೀಡುತ್ತಿದೆ ಎಂದು ಹೇಳಿದರು.

ಸೋಲು ಮತ್ತು ಗೆಲವು ಸಹಜ ಅದನ್ನು ಕ್ರೀಡಾ ಸ್ಪರ್ಧಿಗಳು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಗಳಲ್ಲಿ ತೊಡಗಿಸಿಕೊಂಡವರಿಗೆ ದೈಹಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಹಾಗೂ ಬುದ್ಧಿ ಚುರುಕುಗೊಳ್ಳುತ್ತದೆ. ತಾಲ್ಲೂಕು ದೈಹಿಕ ಶಿಕ್ಷಕರ ಪ್ರೋತ್ಸಾಹದಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಕ್ರೀಡಾ ಸ್ಪರ್ಧಿಗಳು ಅತ್ಯುತ್ತಮ ಸ್ಥಾನಗಳಲ್ಲಿ ವಿಜೇತರಾಗಿ ವಿಭಾಗ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ಬರುವ ಕಾರ್ಯವಾಗಬೇಕು ಎಂದು ಆಶಿಸಿದರು.

ಈ ವೇಳೆ ಜಿಲ್ಲಾ ಮಟ್ಟದ ದಸರಾ ಕ್ರೀಡೆಗಳಿಗೆ ಭಾಗವಹಿಸಿರುವ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ ಬಾಲ್, ಬ್ಯಾಸ್ಕೆಟ್ ಬಾಲ್, ಹಾಕಿ, ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್, ಕುಸ್ತಿ, ಷಟಲ್ ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್, ಥೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, ನೆಟ್ ಬಾಲ್, ಈಜು ಮತ್ತು ಟೆನ್ನಿಸ್ ಕ್ರೀಡೆಗಳನ್ನು ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 24 ರಿಂದ 25 ರವರೆಗೆ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ. ಹರೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯಿತ್ರಿ, ಜಿಲ್ಲಾ ದೈಹಿಕ ಶಿಕ್ಷಣ ಪರೀವಿಕ್ಷಕರಾದ ನಟರಾಜ್, ತಾಲ್ಲೂಕು  ಅರುಣ್,ಪ್ರಾಂಶುಪಾಲ ಬಾಲರಾಜು, ತಾಲ್ಲೂಕು ಅಧ್ಯಕ್ಷ ರಮೇಶ್, ಸೀನಪ್ಪ, ಹನುಮಂತರಾಯಪ್ಪ ಇದ್ದರು.

About The Author

Leave a Reply

Your email address will not be published. Required fields are marked *