ಹುಲಿ ಉಗುರಿನ ನಕಲಿ ಲಾಕೆಟ್ ಕೂಡ ಧರಿಸಬೇಡಿ, ಚಿತ್ರನಟರು, ಗಣ್ಯರಿಗೆ ಈಶ್ವರ್ ಖಂಡ್ರೆ ಮನವಿ
1 min read
1 year ago
ಹುಲಿ ಉಗುರಿನ ಆಭರಣ ವಿವಾದ ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಕಾನೂನು ಎಲ್ಲರಿಗೂ ಒಂದೇ, ನ್ಯಾಯ ಸಮ್ಮತವಾಗಿ ದೂರುಗಳ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.