‘ಹಲೋ ಅಪ್ಪಾ..’ ಆಯಪ್ ಡೌನ್ ಲೋಡ್ ಮಾಡಿ ಪೇಮೆಂಟ್ ಮಾಡಿ : ರಾಜ್ಯ ಸರ್ಕಾರದ ವಿರುದ್ಧ ‘ಬಿಜೆಪಿ’ ಪೋಸ್ಟರ್ ವಾರ್
1 min readರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಬಿಜೆಪಿ ಹಲವು ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದ ಆರೋಪ ಮಾಡಿ ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಗೆ ಇದೀಗ ಬಿಜೆಪಿ ಪೋಸ್ಟರ್ ಮೂಲಕ ಟಕ್ಕರ್ ನೀಡಿದೆ.
ರಾಜ್ಯದ ಮೂಲೆ ಮೂಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.
ವರ್ಗಾವಣೆ ದಂಧೆ, ಗ್ಯಾರಂಟಿ ಯೋಜನೆ ಕುರಿತು ಟೀಕಾ ಪ್ರಹಾರ ನಡೆಸಿರುವ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಪೋಸ್ಟರ್ ಬಿಡುಗಡೆ ಮಾಡಿದೆ. ಕಾರ್ಯಕರ್ತರು ಬೀದಿ ಬೀದಿಗಳಲ್ಲಿ ಪೋಸ್ಟರ್ ಅಂಟಿಸುತ್ತಿದ್ದಾರೆ.