ಕೂಡಲೇ ಒಳ ಮೀಸಲಾತಿ ಜಾರಿಗೆ ಡಿಎಸ್‌ಎಸ್ ಆಗ್ರಹ
1 min readಕೂಡಲೇ ಒಳ ಮೀಸಲಾತಿ ಜಾರಿಗೆ ಡಿಎಸ್‌ಎಸ್ ಆಗ್ರಹ
12ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಧರಣ
ಒಳ ಮೀಸಲಾತಿ ವರ್ಗೀಕರಣ ಮಾಡುವ ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 12ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಭರಣಿ ಹಮ್ಮಿಕೊಂಡಿರುವುದಾಗಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಿ ನರಸಿಂಹಪ್ಪ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಿ ನರಸಿಂಹಪ್ಪ, ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರ ತುರ್ತಾಗಿ ಒಳ ಮೀಸಲಾತಿ ಜಾರಿಗೊಳಿಸಬೇಕು. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿ ಮಾಡಿಕೊಡುವಲ್ಲಿ ಮೀನ ಮೇಷ ಎಣಿಸುತ್ತಿದ್ದಾರೆ. ಇದರಿಂದ ಮುಖ್ಯಮಂತ್ರಿಗಳು ಒಳ ಮೀಸಲಾತಿ ಪರವಾಗಿ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದರು.
ಸುಪ್ರೀ0 ಕೋರ್ಟ್ ತೀರ್ಪು ಪ್ರಕಟಗೊಂಡಾಗ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಆಶಾದಾಯಕವಾಗಿದೆ ಈ ನಿಟ್ಟಿನಲ್ಲಿ ತುರ್ತಾಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಸಂಬ0ಧ ಒಪ್ಪಿಗೆ ಪಡೆದು ಜಾರಿಗೊಳಿಸಬೇಕು ಎಂದರು. ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಇದನ್ನ ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಅನುಷ್ಠಾನ ಮಾಡಿಲ್ಲ, ಹಾಗಾಗಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗಳು ಈಡೇರಿಸುವ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೆಪ್ಟೆಂಬರ್ 12ರಂದು ಸಾಂಕೇತಿಕ ಧರಣಿ ಮಾಡುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಮುಂದೆಯೂ ಅಂದು ಸಾಂಕೇತಿಕ ಧರಣಿ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರದ ಜಿ ಗಂಗಣ್ಣ, ಮಂಚೇನಹಳ್ಳಿಯ ವೆಂಕಟಸ್ವಾಮಿ, ಎಂಜಿ ರಮೇಶ, ಕೃಷ್ಣಪ್ಪ ವೆಂಕಟೇಶ್, ಗೌರಿಬಿದನೂರಿನ ಕೃಷ್ಣ, ಮೋಕ್ಷ ಅಲೈಖ್ಯ, ನರೇಶ್, ನಾರಾಯಣಪ್ಪ ಇದ್ದರು.