ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಸಂಪುಟ ಸಭೆ ಅಂತ್ಯ : ಹಲವು ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ
1 min readಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾದ ಹಲವು ನಿರ್ಧಾರಗಳ ಬಗ್ಗೆ ಸಚಿವ ಹೆಚ್ಕೆ ಪಾಟೀಲ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೌನ್ಸೆಲಿಂಗ್ ಮೂಲಕ ಸಬ್ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮದವರೊಂದಿಗಿ ಮಾತನಾಡಿದ್ದು, ಹಿಂದುಳಿದ ವರ್ಗಗಳ ಇಲಾಖೆಯಡಿ ಭಕ್ತವತ್ಸಲ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಗೈಡ್‌ಲೈನ್ಸ್‌ಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದರು.
ಕೌನ್ಸೆಲಿಂಗ್ ಮೂಲಕ ಸಬ್ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ನೇರವಾಗಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಮಾಡಲಾಗುತ್ತಿತ್ತು. ಈಗಿನಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ. ಈ ವರ್ಷದಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೋಂದಣಿ ಇಲಾಖೆಯಲ್ಲಿ ವರ್ಗಾವಣೆ ಪಾರದರ್ಶಕ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೆ ತರುತ್ತಿದ್ದೇವೆ. ಎಫ್.ಡಿಎ ಹೊರತುಪಡಿಸಿ ಸಬ್ ರಿಜಿಸ್ಟ್ರಾರ್ಗಳಿಗೆ ವರ್ಗಾವಣೆ ಆಗಲಿದೆ. ಕಾರ್ಪೋರೇಷನ್ ಏರಿಯಾದಲ್ಲಿ ಇರುವ ಸಬ್ ರಿಜಿಸ್ಟ್ರಾರ್ಗಳಿಗೆ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇಲಾಖೆಯೇ ನೋಡಿಕೊಳ್ಳಲಿದೆ. ಆ ಮೂಲಕ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಶೋಷಣೆ ಮುಕ್ತ ವ್ಯವಸ್ಥೆ ರೂಪುಗೊಳ್ಳಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday