ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಬಾಗೇಪಲ್ಲಿಯಲ್ಲಿ ಹೋಬಳಿ ಮಟ್ಟದ ಪ್ರೇರಣಾ ಕಾರ್ಯಕ್ರಮ

ಸಿದ್ದರಾಮೇಶ್ವರ ೮೫೩ನೇ ಜಯಂತಿ, ಭೋವಿ ಭವನ ಲೋಕಾರ್ಪಣೆ

ಅಂಧಕಾಸುರ ಸಂಹಾರ ಆಚರಣೆ

January 12, 2025

Ctv News Kannada

Chikkaballapura

ರೈತರು ಗುಣಮಟ್ಟದ ಆಹಾರ ಉಥ್ಪನ್ನ ಬೆಳೆಯಲು ಸಲಹೆ

1 min read

ರೈತರು ಗುಣಮಟ್ಟದ ಆಹಾರ ಉಥ್ಪನ್ನ ಬೆಳೆಯಲು ಸಲಹೆ

ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ಧತಿ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ದೇವನಹಳ್ಳಿಯಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು 2024-25ನೇ ಸಾಲಿನ ರಾಷ್ಟಿಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಉದ್ಘಾಟಿಸಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ಪೌಷ್ಟಿಕತೆ, ಗುಣಮಟ್ಟ ಇರುವುದಿಲ್ಲ. ರಾಸಾಯನಿಕ ಗೊಬ್ಬರದಿಂದ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಪರೋಕ್ಷವಾಗಿ ವಿಷಾಹಾರ ಮನುಷ್ಯನ ದೇಹ ಸೇರುತ್ತಿದೆ ಎಂದರು.

ಸರ್ಕಾರ ರೈತರಿಗೆ ಉತ್ತೇಜನ ನೀಡಿ ಸಾವಯವ ಗೊಬ್ಬರ ಬಳಸಿಕೊಂಡು ಉತ್ತಮ ಇಳುವರಿ ಹಾಗೂ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇದರಿಂದ ಭವಿಷ್ಯದ ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶ ಆಹಾರ ಹಾಗೂ ಗುಣಮಟ್ಟದ ಆಹಾರ ಸಿಕ್ಕಂತಾಗುತ್ತದೆ ಎಂದರು. 1930-40 ರ ದಶಕದ ನಂತರ ಕಾಲಕ್ರಮೇಣ ಜನಸಂಖ್ಯೆ ಹೆಚ್ಚಳದಿಂದ ಆಹಾರದ ಬೇಡಿಕೆ ಹೆಚ್ಚಾಯಿತು. ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ರಾಸಾಯನಿಕ ಗೊಬ್ಬರ ಬಳಕೆ ಅನಿವಾರ್ಯವಾಗಿ ಕೃಷಿ ಉತ್ಪನ್ನಗಳನ್ನು ಹೆಚ್ಚು ಬೆಳೆಯಲು ಪ್ರಾರಂಭಿಸಿದರು. ಇದರ ಬಳಕೆಯಿಂದ ಜನರಲ್ಲಿ ನಿತ್ಯ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಸಿರಿಧಾನ್ಯಗಳು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಕೃಷಿ, ತೋಟಗಾರಿಕೆ, ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಆತ್ಮಶ್ರೇಷ್ಠ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬ0ಧಿಸಿದ ಮಾಹಿತಿಯನ್ನು ಕೃಷಿ ಇಲಾಖೆಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಪರಿಕರಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು. ನಾರಾಯಣಸ್ವಾಮಿ, ರಾಜಣ್ಣ, ಜಗನ್ನಾಥ, ಡಾ. ಕಲಾವತಿ, ಗಾಯಿತ್ರಿ ಇದ್ದರು.

About The Author

Leave a Reply

Your email address will not be published. Required fields are marked *