ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಕೆಐಎಡಿಬಿ ವಿರುದ್ಧ ಮುಂದುವರಿದ ರೈತರ ಹೋರಾಟ

1 min read

ಕೆಐಎಡಿಬಿ ವಿರುದ್ಧ ಮುಂದುವರಿದ ರೈತರ ಹೋರಾಟ
ಸೂಕ್ತ ದರ ನಿಗದಿಗೆ ಒತ್ತಾಯಿಸಿ ರೈತರ ನಿರಂತರ ಹೋರಾಟ
ರೈತರ ಹೋರಾಟಕ್ಕೆ ಕೇಂದ್ರ ಸಚಿವ ಎಚ್.ಡಿ.ಕೆ ಬೆಂಬಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಬಳಿ ಕೆಐಎಡಿಬಿ ವಶಪಡಿಸಿಕೊಳ್ಳುತ್ತಿರುವ ರೈತರ ಜಮೀನಿಗೆ ನ್ಯಾಯಯುತ ಪರಿಹಾರ ಹಣ ನೀಡುವಲ್ಲಿ ಕೆಐಎಡಿಬಿ ಅಧಿಕಾರಿಗಳು ವಿಫಲರಾಗಿದ್ದಾರೆ. ರೈತರು ನಡೆಸುತ್ತಿರುವ ಹೋರಾಟ 165ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಕೆಐಎಡಿಬಿ ಅಧಿಕಾರಿಗಳು ರೈತರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ಎಸ್.ಆರ್ ಬೆಲೆ ಆಧಾರದ ಮೇಲೆ ಭೂ ದರ 1:4 ನಿಗದಿ ಮಾಡಿ ರೈತರನ್ನು ಉಳಿಸಿ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅಧಿಕಾರಿಗಳಿಗೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಬಳಿ ಕೆಐಎಡಿಬಿ ವಶಪಡಿಸಿಕೊಳ್ಳುತ್ತಿರುವ ರೈತರ ಜಮೀನಿಗೆ ನ್ಯಾಯಯುತ ಪರಿಹಾರ ಹಣ ನೀಡುವಲ್ಲಿ ಕೆಐಎಡಿಬಿ ಅಧಿಕಾರಿಗಳು ವಿಫಲರಾದ್ದಾರೆ. ರೈತರು ನಡೆಸುತ್ತಿರುವ ಹೋರಾಟ 165ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಕೆಐಎಡಿಬಿ ಅಧಿಕಾರಿಗಳು ರೈತರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ಎಸ್.ಆರ್ ಬೆಲೆ ಆಧಾರದ ಮೇಲೆ ಭೂ ದರ 1:4 ನಿಗದಿ ಮಾಡಿ ರೈತರನ್ನು ಉಳಿಸಿ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅಧಿಕಾರಿಗಳಿಗೆ ಮನವಿ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಅವರು ಮಾತನಾಡಿದರು.

ರೈತರು ತಮ್ಮ ಜೀವನಕ್ಕಾಗಿ ಕಳೆದ 165 ದಿನಗಳಿಂದ ಸತತವಾಗಿ ಹೋರಾಟ ನೆಡೆಸುತ್ತಿದ್ದರು ಯಾವುದೇ ರೀತಿಯ ಪರಿಹಾರ ನೀಡದ ಅಧಿಕಾರಿಗಳು ನಮ್ಮಲ್ಲಿರುವುದು ವಿಪರ್ಯಾಸ. ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡುತ್ತಿಲ್ಲ ಅದು ಒಂದು ರೀತಿಯ ದಾನ ಮಾಡಿದಂತೆ ಅದನ್ನು ಅಧಿಕಾರಿಗಳು ಅರಿತು ರೈತರ ಪರ ನಿಲ್ಲಬೇಕಿದೆ. ಅಧಿಕಾರಿಗಳ ಧೋರಣೆ ಬಗ್ಗೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಅವರು ಬೆಂಬಲವಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೆಐಎಡಿಬಿ ಭೂ ಪರಿಹಾರ ಧನ ವಿತರಣೆಯಲ್ಲಿ ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ . ನಮ್ಮ ರೈತರ ನಿಯೋಗ ಅವರನ್ನು ಸಂಪರ್ಕಿಸಿದ ದಿನವೇ ಕೆಐಎಡಿಬಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿ ಹೇಳಿ ರೈತರಿಗೆ ಉತ್ತಮ ಬೆಲೆ ನೀಡುವಂತೆ ತಿಳಿಸಿದ್ದಾರೆ ಎಂದರು.

ಕೊನಘಟ್ಟ ರೈತ ಮುಖಂಡ ಆನಂದ್ ಮಾತನಾಡಿ, ಸರ್ಕಾರದ ಮಾನದಂಡಗಳನ್ನು ಉಲ್ಲಂಘಸಿ ಭೂ ದರ ನಿಗದಿ ಮಾಡಿರುವ ಹಿನ್ನಲೆ ರೈತರು ಕೆಐಎಡಿಬಿ ಅಧಿಕಾರಿಗಳ ವಿರುದ್ಧ ಸತತ 165 ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದ ರೈತರ ಪ್ರತಿ ಎಕರೆ ಭೂಮಿಗೆ ಕೆಐಎಡಿಬಿ ಅಧಿಕಾರಿಗಳು 20 ಲಕ್ಷ ರೂ. ಅಧಿಕ ಮೊತ್ತ ಘೋಷಣೆ ಮಾಡಿರುವುದು ನಮ್ಮ ಯಶಸ್ಸಿಗೆ ಪೂರಕವಾಗಿದೆ. ಆದರೆ ಇದು ಕೂಡ ವೈನಿಕವಾಗಿಲ್ಲ. ಕಾನೂನಾತ್ಮಕವಾಗಿಯೇ ಸರ್ಕಾರದ ಮಾನದಂಡಗಳ ಪ್ರಕಾರ 1:4 ದರಕ್ಕೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದೇವೆ. ಜಿಲ್ಲಾಧಿಕಾರಿಗಳು ಮತ್ತೊಮ್ಮೆ ಪುರ್ನ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ನೀಡಿ ರೈತಾಪಿ ವರ್ಗಕ್ಕೆ ಅನುಕೂಲ ಮಾಡಿಕೊಳ್ಳಬೇಕು ಎಂದರು.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

 

About The Author

Leave a Reply

Your email address will not be published. Required fields are marked *