ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಸಮಯಕ್ಕೆ ಸರಿಯಾಗಿ ಗೊಬ್ಬರ ಸಿಗದೆ ರೈತರ ಪರದಾಟ

1 min read

ಸಮಯಕ್ಕೆ ಸರಿಯಾಗಿ ಗೊಬ್ಬರ ಸಿಗದೆ ರೈತರ ಪರದಾಟ
ಡಿಎಪಿ ಜೊತೆಗೆ ಯೂರಿಯಾ ಸಿಗದೇ ರೈತರ ಸಂಕಷ್ಟ

ಬಾಗೇಪಲ್ಲಿ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ರಸಗೊಬ್ಬರಗಳ ಮಾರಾಟ ಕೇಂದ್ರ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರ ಸೋಮವಾರ ಬೆಳಗ್ಗೆ 10.30 ಗಂಟೆಯಾದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ರೈತರು ಪರದಾಡಿದ ಪರಿಸ್ಥಿತಿ ನಿರ್ಮಾಣವಾಯಿತು.

ಬಾಗೇಪಲ್ಲಿ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ರಸಗೊಬ್ಬರಗಳ ಮಾರಾಟ ಕೇಂದ್ರ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರ ಸೋಮವಾರ ಬೆಳಗ್ಗೆ 10.30 ಗಂಟೆಯಾದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ರೈತರು ಪರದಾಡಿದ ಪರಿಸ್ಥಿತಿ ನಿರ್ಮಾಣವಾಯಿತು. ಬಾಗೇಪಲ್ಲಿ ತಾಲೂಕಿನಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆಯಾಗಿದ್ದು, ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಪೂರೈಸಲು ಬೆಳ್ಳಂ ಬೆಳಗ್ಗೆ ಗೊಬ್ಬರ ಮಾರಾಟ ಮಳಿಗೆ ಮುಂದೆ ಜಮಾಯಿಸಿ, ಕಾದು ಕುಳಿತ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯ ಮತ್ತು ಕೇಂದ್ರ ಸರ್ಕಾರ ಆಡಳಿತ ವೈಫಲ್ಯಗಳಿಂದಾಗಿ ರಸಗೊಬ್ಬರಕ್ಕೂ ಪರದಾಡುವ ಪರಿಸ್ಥಿತಿ ಇದೆ. ಪೂರೈಕೆ ಮತ್ತು ದಾಸ್ತಾನು ವ್ಯವಸ್ಥೆಯ ಲೋಪ, ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟ, ಅನಧಿಕೃತ ಲಿಂಕ್ ವ್ಯವಸ್ಥೆ, ಖಾಸಗಿಯವರ ಕೈಚಳಕ ಮುಂತಾದ ಕಾರಣಗಳಿಂದಾಗಿ ಬಹುತೇಕ ಕಡೆ ರೈತರಿಗೆ ಬೇಕಾದ ರಸಗೊಬ್ಬರ ಸಕಾಲಕ್ಕೆ ಸಿಗುತ್ತಿಲ್ಲ.ದೇಶದ ಬೆನ್ನೆಲುಬಾದ ರೈತರು ಪ್ರತಿ ವರ್ಷ ಉಂಟಾಗುತ್ತಿರುವ ಅತಿವೃಷ್ಟಿ, ಅನಾವೃಷ್ಟಿಗೆ ಬೆಳೆದ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ಇರುವುದು ಸೇರಿದಂತೆ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಅದರ ಸಾಲಿಗೆ ರಸಗೊಬ್ಬರ ಸಮಸ್ಯೆಯೂ ಇದೀಗ ಸೇರ್ಪಡೆಯಾಗಿದೆ.

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಈಶ್ವರ ರೆಡ್ಡಿ ಮಾತನಾಡಿ, ಭಾನುವಾರ ರಾತ್ರಿ ಉತ್ತಮ ಮಳೆಯಾಗಿದ್ದು, ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಪೂರೈಸಲು ಬೆಳಗ್ಗೆ ಗೊಬ್ಬರ ಮಾರಾಟ ಮಳಿಗೆ ಮುಂದೆ ಜಮಾಯಿಸಿದ್ದಾರೆ. ಗಂಟೆಗಟ್ಟಲೇ ಸಾಲಿನಲ್ಲಿ ನಿಂತರೂ ಮಳಿಗೆಯ ಬಾಗಿಲು ತೆಗೆಯದ ಹಿನ್ನಲೆಯಲ್ಲಿ ಊಟ, ನೀರು ಇಲ್ಲದೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಗ್ರಾಮೀಣ ಭಾಗಗಳಿಂದ ರೈತರು ಬೆಳಗ್ಗೆಯೇ ಬಂದು ಗೊಬ್ಬರಕ್ಕಾಗಿ ಕಾಯುತ್ತಿದ್ದು, ಈ ಬಗ್ಗೆ ಸಂಬ0ಧಪಟ್ಟವರು ಇತ್ತ ಗಮನಹರಿಸದೆ ರೈತರ ಸಮಸ್ಯೆ ಕೇಳುವವರಿಲ್ಲ ಎನ್ನುವಂತಾಗಿದೆ. ಸಂಬ0ಧಪಟ್ಟ
ಅಧಿಕಾರಿಗಳು ಗಮನಹರಿಸಿ ರಸಗೊಬ್ಬರ ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಸ್ತುತ ಈ ಭಾಗದಲ್ಲಿ ಮೆಕ್ಕೆಜೋಳ, ನೆಲಗಡಲೆ ಸೇರಿದಂತೆ ವಿವಿಧ ಬೆಳೆ ಬೆಳೆಯುತ್ತಿದ್ದು, ಬೆಳೆಗಳಿಗೆ ಯೂರಿಯಾ ಅತ್ಯವಶ್ಯಕವಾಗಿದೆ. ಆದರೆ ಕಳೆದೊಂದು ವಾರದಿಂದ ಯೂರಿಯಾ ಸಿಗದೇ ರೈತರು ಪರದಾಡುವಂತಾಗಿದೆ. ಕೂಡಲೇ ಅಗತ್ಯ ಗೊಬ್ಬರ ಒದಗಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.

About The Author

Leave a Reply

Your email address will not be published. Required fields are marked *