ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಕೊನೆಗೂ ಶೆಟ್ಟರ್​ಗೆ ಸಿಕ್ತು ಟಿಕೆಟ್; ಅನಂತಕುಮಾರ್​ ಹೆಗ್ಡೆಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್!

1 min read

ಬಿಜೆಪಿಯ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ವ್ಯಾಪಕ ವಿರೋಧದ ನಡುವೆಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಅವರಿಗೆ ಬೆಳಗಾವಿಯಿಂದ ಟಿಕೆಟ್ ನೀಡಲಾಗಿದೆ. ಇತ್ತ ನಾನೇ ಅಭ್ಯರ್ಥಿ ಎಂದು ಇಡೀ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಆರಂಭಿಸಿದ್ದ ಉತ್ತರ ಕನ್ನಡ ಹಾಲಿ ಸಂಸದ ಅನಂತ್​​ಕುಮಾರ್ ಹೆಗ್ಡೆ ಬಿಜೆಪಿ ಹೈಕಮಾಂಡ್​​ಗೆ ಬಿಗ್ ಶಾಕ್ ನೀಡಿದೆ.

ಅನಂತ್​ಕುಮಾರ್ ಹೆಗ್ಡೆ ಅವರಿಗೆ ಕೊಕ್ ನೀಡಿರುವ ಹೈಕಮಾಂಡ್ ಆ ಜಾಗಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri)
ಅವರಿಗೆ ಟಿಕೆಟ್ ನೀಡಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರನ್ನು ಬಿಜೆಪಿ ಬಾಕಿ ಉಳಿಸಿಕೊಂಡಿದೆ. ಇನ್ನುಳಿದ ಮೂರು ಕ್ಷೇತ್ರಗಳಾದ ಹಾಸನ, ಕೋಲಾರ ಮತ್ತು ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ.

ಬಿಜೆಪಿ ಅಭ್ಯರ್ಥಿಗಳು

ಅಭ್ಯರ್ಥಿಗಳ ಹೆಸರು ಲೋಕ ಸಭಾ ಕ್ಷೇತ್ರ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ
ಜಗದೀಶ್ ಶೆಟ್ಟರ್ ಬೆಳಗಾವಿ ಮೃಣಾಲ್ ಹೆಬ್ಬಾಳ್ಕರ್
ಡಾ.ಕೆ ಸುಧಾಕರ್ ಚಿಕ್ಕಬಳ್ಳಾಪುರ ಅಂತಿಮವಾಗಿಲ್ಲ
ರಾಜಾ ಅಮರೇಶ್ವರ್ ನಾಯಕ್ ರಾಯಚೂರು ಕುಮಾರ್ ನಾಯಕ್
ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್

ವಿಫಲವಾದ ಎಸ್​ ಆರ್ ವಿಶ್ವನಾಥ್ ಪ್ರಯತ್ನ

ಚಿಕ್ಕಬಳ್ಳಾಪುರದ ಹಾಲಿ ಸಂಸದ ಬಿಎನ್ ಬಚ್ಛೇಗೌಡ ಚುನಾವಣೆ ನಿವೃತ್ತಿ ಘೋಷಣೆ ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುವ ಮೂಲಕ ಬಿಜೆಪಿಯಿಂದ ದೂರ ಹೋಗಿದ್ದಾರೆ.

ತೆರವಾದ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್​ನ್ನು ಮಗನಿಗೆ ಕೊಡಿಸಲು ಮಾಜಿ ಸಚಿವ ಎಸ್​ಆರ್ ವಿಶ್ವನಾಥ್ ಪ್ರಯತ್ನಿಸಿದ್ದರು. ಅಂತಿಮವಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಬಿವಿ ನಾಯಕ್​ಗೆ ತಪ್ಪಿದ ಟಿಕೆಟ್

ಇನ್ನು ರಾಯಚೂರು ಭಾಗದಲ್ಲಿ ಮಾಜಿ ಸಂಸದ ಬಿವಿ ನಾಯಕ್ ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ಅಳೆದು ತೂಗಿ ರಾಜಾ ಅಮರೇಶ್ವರ್ ನಾಯಕ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ

ಲೋಕಸಭಾ ಚುನಾವಣೆಯ ಮಾಹಿತಿ

ಮೊದಲ ಹಂತದಲ್ಲಿ 14 ಕ್ಷೇತ್ರ- ಏಪ್ರಿಲ್ 26ಕ್ಕೆ ಮತದಾನ

ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಅಧಿಸೂಚನೆ ಮಾರ್ಚ್ 28ರಂದು ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಏಪ್ರಿಲ್ 4 ಆಗಿದ್ದು, ಪರಿಶೀಲನೆ ಏಪ್ರಿಲ್ 5ರಂದು ನಡೆಯಲಿದೆ. ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 14 ಕ್ಷೇತ್ರ – ಮೇ 7ಕ್ಕೆ ಮತದಾನ

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದ್ರೆ ಮೇ 7ರಂದು ಚುನಾವಣೆ ನಡೆಯಲಿದೆ.

ಎರಡನೇ ಹಂತದ ಚುನಾವಣೆಯ ಅಧಿಸೂಚನೆ ಏಪ್ರಿಲ್ 12ರಂದು ಆರಂಭಗೊಳ್ಳಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 20ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು , ಏಪ್ರಿಲ್ 22 ನಾಮಿನೇಷನ್ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *