ಗುಬ್ಬಿಯಲ್ಲಿ ಮಾಜಿ ಶಾಸಕ ವೆಂಕಟರಮಣಿಪ್ಪ ಸ್ಪಷ್ಟನೆ
1 min readಜಿಪಂ, ತಾಪಂ ಚುನಾವಣೆಗೆ ಕಾಂಗ್ರೆಸ್ ಸಂಘಟನೆ
ಗುಬ್ಬಿಯಲ್ಲಿ ಮಾಜಿ ಶಾಸಕ ವೆಂಕಟರಮಣಿಪ್ಪ ಸ್ಪಷ್ಟನೆ
ಮು0ಬರುವ ಜಿಪಂ, ತಾಪಂ ಮತ್ತು ಸಹಕಾರ ಸಂಘಗಳ ಚುನಾವಣೆ ಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ನ್ನು ಸಂಘಟಿಸಲು ಸಭೆೆಗಳನ್ನು ಮಾಡಲಾಗುತ್ತಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವೆಂಕಟರಮಣಪ್ಪ ತಿಳಿಸಿದರು.
ಗುಬ್ಬಿ ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆ ನಂತರ ಮಾತನಾಡಿದ ತುಮಕೂರು ಜಿಲ್ಲೆ ಕಾಂಗ್ರೆಸ್ ಉಸ್ತುವಾರಿ ವೆಂಕಟರಮಣಪ್ಪ, ಡಿಸೆಂಬರ್‌ನಲ್ಲಿ ತುಮಕೂರು ಜಿಲ್ಲೆ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ ನಡೆಯಲಿದ್ದು, ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಪಕ್ಷ ಸಂಘಟನೆ, ಕಾರ್ಯಕರ್ತರು, ಮುಖಂಡರ ಸಭೆಗಳನ್ನು ಮಾಡಲಾಗುತ್ತಿದೆ. ಹೇಮಾವತಿ ಲಿಂಕ್ ಕೆನಾಲ್ ಸಮಸ್ಯೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲಾಗುವುದು ಎಂದರು.
ಕಾ0ಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮಾತನಾಡಿ, ಕುಡಿಯುವ ನೀರು ಪ್ರತಿಯೊಬ್ಬರಿಗೂ ಬೇಕಾಗಿದೆ, ಗುಬ್ಬಿ ಭಾಗದ ರೈತರು ನಾಲೆಯ ಮೂಲಕ ನೀರು ತೆಗೆದುಕೊಂಡು ಹೋಗಿ ಎನ್ನುತ್ತಾರೆ, ಆದರೆ ಕುಣಿಗಲ್ ಭಾಗದ ಜನರು ಪೈಪ್ ಲೈನ್ ಮೂಲಕ ನೀರು ಬೇಕು ಎನ್ನುತ್ತಾರೆ. ಈ ಸಮಸ್ಯೆ ಬಗೆಹರಿಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯಲಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಪಪಂ ಅಧ್ಯಕ್ಷೆ ಮಂಗಳಮ್ಮ, ತಾತಯ್ಯ, ರೇಣುಕಾರಾಧ್ಯ, ನಿಟ್ಟೂರು ಶಂಕರಾನ0ದ, ಸೌಭಗ್ಯಮ್ಮ, ಕೊಡಿಯಾಲ ಮಹಾದೇವ, ಕಡಬ ಶಂಕರ್, ಚೇಳೂರು ಶಿವನಂಜಪ್ಪ ಇದ್ದರು.