ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಫೋಕ್ಸೋ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ

1 min read

POSCO act

ಫೋಕ್ಸೋ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ

50 ಸಾವಿರ ದಂಡ ವಿಧಿಸಿ ಆದೇಶಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ

ಆರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅತ್ಯಾಚಾರ ನಡೆಸಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಅಪರ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಆರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅತ್ಯಾಚಾರ ನಡೆಸಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು ೫೦ ಸಾವಿರ ದಂಡ ವಿಧಿಸಿ ಅಪರ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ಶಕೀಲ್ ಮೌಲಾನಾಸಾಬ್ ನೂರಬಾಗ್ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದು, 2023ರ ಜು. 6 ರಂದು ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಕುರಿತು ಆಕೆಯ ತಾಯಿ ನೀಡಿರುವ ದೂರಿನ ಆದರದ ಮೇಲೆ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಬೀದರ್ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಶ್ರೀನಿವಾಸ ಅಲ್ಲಾಪೂರ ತನಿಖೆ ನಡೆಸಿ, ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಲ್ಲಿ ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಆರೋಪಿ ವಿರುದ್ಧ ಆರೋಪಗಳು ಸಾಬೀತು ಆಗಿರುವ ಹಿನ್ನಲೆ ಪೊಕ್ಸೋ ಕಾಯ್ದೆಯ ಕಲಂ ೬ರ ಜೊತೆ ಭಾರತೀಯ ದಂಡ ಸಂಹಿತೆ ಕಲಂ 376 ಎ,ಬಿ ಅಡಿ ಕಠಿಣ ಜೀವಾವಧಿ ಶಿಕ್ಷೆ ಮತ್ತು 50ಸಾವಿರ ರೂ ದಂಡ ಆದೇಶ ನೀಡಿದ್ದಾರೆ.

ದಂಡ 50 ಸಾವಿರ ಮೊತ್ತವನ್ನು ನೊಂದ ಬಾಲಕಿಗೆ ನೀಡಬೇಕು. ರಾಜ್ಯ ಸರ್ಕಾರ 3 ಸಾವಿರ ಭರಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೊಂದ ಬಾಲಕಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಟಿ. ಸಿದ್ದೇಶ್ವರ ವಾದ ಮಂಡಿಸಿದ್ದರು.

 

 

 

About The Author

Leave a Reply

Your email address will not be published. Required fields are marked *